ಶಿವಮೊಗ್ಗ: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಬ್ ಇನ್ಸ್‌ಪೆಕ್ಟರ್‌ಗಳ (Sub Inspectors) ವರ್ಗಾವಣೆಯಾಗಿದೆ. ಈ ಸಂಬಂಧ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ಡಾ. ಬಿ.ಆರ್.ರವಿಕಾಂತೇಗೌಡ ಆದೇಶಿಸಿದ್ದಾರೆ.
ಯಾರೆಲ್ಲ ವರ್ಗವಾಗಿದ್ದಾರೆ?
ಮಂಜುನಾಥ ಎಸ್.ಕುರಿ – ಹೊಳೆಹೊನ್ನೂರು ಠಾಣೆಯಿಂದ ಹಾವೇರಿಯ ಬಂಕಾಪುರ ಪೊಲೀಸ್ ಠಾಣೆಗೆ ವರ್ಗಾವಣೆ.
ರಂಗನಾಥ ಅಂತರಗಟ್ಟಿ – ಆಗುಂಬೆ ಪೊಲೀಸ್ ಠಾಣೆಯಿಂದ ಹಾವೇರಿಯ ಸವಣೂರು ಪೊಲೀಸ್ ಠಾಣೆಗೆ ವರ್ಗಾವಣೆ.
ಹೊಳಬಸಪ್ಪ ಹೊಳಿ – ಕಾರ್ಗಲ್ ಪೊಲೀಸ್ ಠಾಣೆಯಿಂದ ದಾವಣಗೆರೆಯ ನ್ಯಾಮತಿ ಪೊಲೀಸ್ ಠಾಣೆಗೆ ವರ್ಗಾವಣೆ.
ಶಿವನಗೌಡ – ಸಿಇಎನ್ ಪೊಲೀಸ್ ಠಾಣೆಯಿಂದ ಆಗುಂಬೆ ಪೊಲೀಸ್ ಠಾಣೆಗೆ ವರ್ಗಾವಣೆ.
ಸುನೀಲ.ಬಿ.ಸಿ – ವಿನೋಬನಗರ ಪೊಲೀಸ್ ಠಾಣೆಯಿಂದ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ವರ್ಗಾವಣೆ.
ಪ್ರವೀಣ್.ಎಸ್.ಪಿ – ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಿಂದ ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆ.
ಇದನ್ನೂ ಓದಿ » ವಿನೋಬನಗರದಲ್ಲಿ ಅಪಘಾತ, ಆಟೋ ಚಾಲಕ ಸಾವು, ಬೈಕ್ ಸವಾರನಿಗೆ ಗಾಯ, ಹೇಗಾಯ್ತು ಘಟನೆ?
ರಾಜುರೆಡ್ಡಿ ಬೆನ್ನೂರು – ಆನವಟ್ಟಿ ಪೊಲೀಸ್ ಠಾಣೆಯಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆ.
ಸುನಿಲ್ ಬಿ.ತೇಲಿ – ದಾವಣಗೆರೆಯ ಡಿಸಿಆರ್‌ಬಿಯಿಂದ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಗೆ ವರ್ಗಾವಣೆ.
ನಾಗರಾಜ್.ಹೆಚ್.ಎನ್ – ಸೊರಬ ಪೊಲೀಸ್ ಠಾಣೆಯಿಂದ ಕಾರ್ಗಲ್ ಪೊಲೀಸ್ ಠಾಣೆಗೆ ವರ್ಗಾವಣೆ.
ಯುವರಾಜ – ಆನಂದಪುರ ಪೊಲೀಸ್ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ. ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.
ಚಂದ್ರಶೇಖರ ನಾಯ್ಕ್ – ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ. ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200