ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | MYSORE | 30 ಜೂನ್ 2022
ಕೋವಿಡ್’ಗೂ ಮೊದಲು ಶಿವಮೊಗ್ಗದಿಂದ ಕಾರ್ಯಾಚರಿಸುತ್ತಿದ್ದ ರೈಲು ಸೇವೆಗಳನ್ನು ಪುನಾರಂಭ ಮಾಡಬೇಕು, ವಿವಿಧ ರಾಜ್ಯಗಳ ರಾಜಧಾನಿಗೆ ಸಂಪರ್ಕ ಕಲ್ಪಿಸಲು ಹೊಸ ರೈಲುಗಳನ್ನು ಆರಂಭಿಸಬೇಕು ಸೇರಿದಂತೆ ವಿವಿಧೆ ಬೇಡಿಕೆಗಳ ಕುರಿತು ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸಭೆಯಲ್ಲಿ ಮನವಿ ಮಾಡಲಾಯಿತು.
.png)
ಮೈಸೂರಿನಲ್ಲಿರುವ ನೈಋತ್ಯ ರೈಲ್ವೆಯ ವ್ಯವಸ್ಥಾಪಕರ ಕಚೇರಿ ಸಭಾಂಗಣದಲ್ಲಿ ಇವತ್ತು ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಲಾಯಿತು. ಈ ವೇಳೆ ಶಿವಮೊಗ್ಗ ರೈಲ್ವೆ ಯೋಜನೆಗಳ ಕುರಿತು ಚರ್ಚೆ ನಡೆಸಲಾಯಿತು.
ಶಿವಮೊಗ್ಗ ಸಂಬಂಧ ಏನೆಲ್ಲ ಚರ್ಚೆಯಾಯ್ತು?
♦ ತಾಳಗುಪ್ಪ ಮತ್ತು ಶಿವಮೊಗ್ಗ ಟೌನ್ ನಿಂದ ಚೆನ್ನೈ ಮತ್ತು ಮೈಸೂರು ಕಡೆಗೆ ಕೋವಿಡ್ ಪೂರ್ವ ಅವಧಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಎಲ್ಲಾ ರೈಲು ಸೇವೆಗಳನ್ನು ಪುನಾರಂಭ ಮಾಡಬೇಕು.
♦ ಶಿವಮೊಗ್ಗ ನಿಲ್ದಾಣದಿಂದ ಸಿಕಂದರಾಬಾದ್ ಮತ್ತು ಭುವನೇಶ್ವರ ಸೇರಿದಂತೆ ವಿವಿಧ ರಾಜ್ಯಗಳ ರಾಜಧಾನಿಗಳನ್ನು ಸಂಪರ್ಕಿಸುವ ಹೊಸ ರೈಲು ಸೇವೆಗಳನ್ನು ಪ್ರಾರಂಭಿಸಬೇಕು.
♦ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ಮಂಜೂರಾಗಿರುವ ಬೋಗಿ ಆರೈಕೆ ಕೇಂದ್ರದ ಕಾಮಗಾರಿಯನ್ನು ವೇಗಗೊಳಿಸುವ ಕುರಿತು ಮನವಿ ಮಾಡಲಾಯಿತು.
ಮೈಸೂರ ವಿಭಾಗದ ವ್ಯಾಪ್ತಿಯಲ್ಲಿನ ರೈಲ್ವೆ ನಿಲ್ದಾಣಗಳಲ್ಲಿನ ಶುಚಿತ್ವ, ವಿಶೇಷ ರೈಲುಗಳ ಪ್ರಾರಂಭ, ಬೋಗಿಗಳ ಹೆಚ್ಚಳ ಸೇರಿದಂತೆ ವಿವಿಧ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು.
ಶಿವಮೊಗ್ಗ ಜಿಲ್ಲಾ ಮಂಡಳಿ ಮತ್ತು ವಾಣಿಜ್ಯ ಕೈಗಾರಿಕಾ ನಿರ್ದೇಶಕರಾದ ಎಸ್.ಎಸ್.ಉದಯ್ ಕುಮಾರ್ ಸೇರಿದಂತೆ ವಿವಿಧೆಡೆಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರ್ವಾಲ್, ಮೈಸೂರು ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ದೇವಸಹಾಯಂ ಮತ್ತು ಇ.ವಿಜಯ, ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಮಂಜುನಾಥ ಕನಮಡಿ, ಹಿರಿಯ ವಿಭಾಗೀಯ ಕಾರ್ಯಾಚರಣೆ ವ್ಯವಸ್ಥಾಪಕ ಲೋಹಿತೇಶ್ವರ, ಹಿರಿಯ ವಿಭಾಗೀಯ ಅಭಿಯಂತರ ಕೆ.ರವಿಚಂದ್ರನ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ – ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್, ಶಿವಮೊಗ್ಗಕ್ಕೆ ಎನ್ಐಎ ಟೀಮ್
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















