ರಣ ಬಿಸಿಲಿನಿಂದಾಗಿ ಶಿವಮೊಗ್ಗದಲ್ಲಿ ವ್ಯಾಪಾರ, ವಹಿವಾಟು ಕುಂಟಿತವಾಗಿದೆ. ಸಾಮಾನ್ಯವಾಗಿ ನಗರದಲ್ಲಿ 10 ಗಂಟೆ ನಂತರ ವಹಿವಾಟು ಆರಂಭವಾಗುತ್ತದೆ. ಈ ಹೊತ್ತಿಗಾಗಲೆ ಮೈಸುಡುವ ಬಿಸಿಲಿರುತ್ತದೆ. ಹಾಗಾಗಿ ಬೆಳಗ್ಗೆಯಿಂದಲೇ ವ್ಯಾಪಾರ ಡಲ್ ಹೊಡೆಯುತ್ತದೆ ಎಂದು ವ್ಯಾಪಾರಿಗಳು ಬೇಸರ ವ್ಯಕ್ತಪಡಿಸುತ್ತಾರೆ. ಸಂಜೆವರೆಗೂ ಪ್ರಮುಖ ವಾಣಿಜ್ಯ ಕೇಂದ್ರಗಳಾದ ಗಾಂಧಿ ಬಜಾರ್, ನೆಹರೂ ರಸ್ತೆಯಲ್ಲಿ ಜನರ ಸಂಚಾರ ತುಂಬಾ ಕಡಿಮೆಯಾಗಿದೆ.
ಪಾನಿಯಗಳು, ಐಸ್ ಕ್ರೀಂ, ಎಳನೀರಿಗೆ ಬೇಡಿಕೆ
ಬಿಸಿಲಿನ ಬೇಗೆಯಿಂದ ದಣಿವಾರಿಸಿಕೊಳ್ಳಲು ಜನರು ತಂಪು ಪಾನಿಯಗಳು, ಐಸ್ ಕ್ರೀಂ, ಎಳನೀರು, ಹಣ್ಣುಗಳ ಮೊರೆ ಹೋಗಿದ್ದಾರೆ. ಬೇಕರಿ ಮತ್ತು ಅಂಗಡಿಗಳಲ್ಲಿ ಕೂಲ್ ಡ್ರಿಂಕ್ಸ್ ಮತ್ತು ಕೋಲ್ಡ್ ವಾಟರ್ಗೆ ಡಿಮಾಂಡ್ ಹೆಚ್ಚಿದೆ. ಜೂಸ್ ಸೆಂಟರ್ಗಳಲ್ಲಿ ಐಸ್ ಹಾಕಿದ ಜೂಸ್ಗಳಿಗೆ ಬೇಡಿಕೆ ಇದೆ. ಇನ್ನು, ಐಸ್ ಕ್ರೀಂ ಪಾರ್ಲರ್ಗಳಲ್ಲು ಜನರ ಸಂಖ್ಯೆ ಹೆಚ್ಚಿದೆ. ಎಳನೀರಿನ ಬೇಡಿಕೆ ಮೂರು ಪಟ್ಟು ಹೆಚ್ಚಿದೆ. ದೊಡ್ಡ ವ್ಯಾಪಾರಿಗಳ ಹೊರತು ಸಣ್ಣಪುಟ್ಟ ವ್ಯಾಪಾರಿಗಳಿಗೆ ಎಳನೀರು ದೊರೆಯುತ್ತಿಲ್ಲ ಎಂಬ ಆರೋಪವಿದೆ.
ಸಿಗ್ನಲ್ನಲ್ಲಿ ನೆರಳಿಗೆ ಹುಡುಕಾಟ, ಮರದ ಕಳಕೆ ವಾಹನ ಪಾರ್ಕಿಂಗ್ಗೆ ಪರದಾಟ – ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ