ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 FEBRUARY 2024
SHIMOGA : ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಫೆಬ್ರವರಿ ತಿಂಗಳಲ್ಲಿ ಸಾರ್ವಜನಿಕರ ಕುಂದು ಕೊರತೆ, ಅರ್ಜಿ ಸ್ವೀಕಾರ ಸಭೆ ಆಯೋಜಿಸಿದ್ದಾರೆ. ನಿಗದಿತ ದಿನಾಂಕಗಳನ್ನು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಭೆ ನಡೆಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲೆಲ್ಲಿ ಯಾವಾಗ ಸಭೆ ನಡೆಯಲಿದೆ?
ಫೆ. 26 ರಂದು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ ಮತ್ತು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ. ಫೆ. 27 ರಂದು ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಹೊಸನಗರ ತಾಲೂಕು ಕಚೇರಿ ಸಭಾಂಗಣ. ಫೆ.28 ರಂದು ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ. ಫೆ.29 ರಂದು ಶಿವಮೊಗ್ಗ ತಾಲೂಕು ಪಂಚಾಯತ್ ಸಭಾಂಗಣಗಳಲ್ಲಿ ಸಭೆ ನಡೆಯಲಿದೆ.
ಏನೇನೆಲ್ಲ ದೂರು ಸಲ್ಲಿಸಬಹುದು?
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ದಾರಿತನ, ನಿರ್ಲಕ್ಷ್ಯ. ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಇದನ್ನೂ ಓದಿ – ಸರ್ಕಾರಿ ನೌಕರರ ಸಮ್ಮೇಳನಕ್ಕೆ ಶಿವಮೊಗ್ಗದಿಂದ 100 ಬಸ್, 3 ಬೇಡಿಕೆ ಸಲ್ಲಿಸಲು ಪ್ಲಾನ್, ಏನೇನು ಬೇಡಿಕೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422