ಬಿರು ಬೇಸಿಗೆ, ಶಿವಮೊಗ್ಗದ ನೂರಕ್ಕೂ ಹೆಚ್ಚು ಗ್ರಾಮಗಳಿಗೆ ಟ್ಯಾಂಕರ್‌ ನೀರು, ಯಾವ್ಯಾವ ತಾಲೂಕಲ್ಲಿ ಎಷ್ಟು ಹಳ್ಳಿಗೆ ನೀರು ಪೂರೈಕೆಯಾಗ್ತಿದೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 20 MAY 2023

SHIMOGA : ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ. ಹಾಗಾಗಿ ಟ್ಯಾಂಕರ್‌ಗಳ (Tanker) ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಕೆಲವು ಕಡೆ ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಇನ್ನು, ಕುಡಿಯುವ ನೀರು ಪೂರೈಕೆ ಸಂಬಂಧ ಟಾಸ್ಕ್‌ ಫೋರ್ಸ್‌ ರಚಿಸಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Water-Tanker-Water-Supply-in-Shimoga-city

ಶಿವಮೊಗ್ಗ ಜಿಲ್ಲೆಯ 109 ಗ್ರಾಮಗಳಿಗೆ ಟ್ಯಾಂಕರ್‌ (Tanker) ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಅಂಕಿ ಅಂಶಗಳಲ್ಲಿ ತಿಳಿಸಲಾಗಿದೆ.

ಟಾಸ್ಕ್‌ ಫೋರ್ಸ್‌ ರಚನೆ

ಕುಡಿಯುವ ನೀರು ಪೂರೈಕೆ ಗ್ರಾಮ ಪಂಚಾಯಿತಿಯ ಮೊದಲ ಆದ್ಯತೆಯಾಗಿರಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದ್ದಾರೆ. ಅದರಂತೆ ಜಿಲ್ಲಾ ಪಂಚಾಯಿತಿ ಸಿಇಓ ಅವರು ಸೂಚನೆ ಅನ್ವಯ ಟಾಸ್ಕ್‌ ಫೊರ್ಸ್‌ ರಚಿಸಲಾಗಿದೆ. ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರ್‌ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಅವರು ಇದರಲ್ಲಿದ್ದಾರೆ. ಈಗಾಗಲೆ ಕುಡಿಯುವ ನೀರಿನ ಅಭಾವ ಉಂಟಾಗಿರುವ ಗ್ರಾಮಗಳನ್ನು ಪರಿಶೀಲಿಸಲಾಗಿದೆ.

ಕೊಳವೆ ಬಾವಿ, ಟ್ಯಾಂಕರ್‌ ನೀರು

ನೀರಿನ ಅಭಾವ ಇರುವ ಕಡೆಯಲ್ಲಿ ಕೊಳವೆ ಬಾವಿಗಳನ್ನು ಕೊರೆಯಿಸಬೇಕು. ಈಗಾಗಲೆ ಕೊಳವೆ ಬಾವಿಗಳಿದ್ದು ನೀರು ಕಡಿಮೆಯಾಗಿದ್ದರೆ ಇನ್ನಷ್ಟು ಆಳ ಕೊರೆಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಬೇಕು ಎಂದು ಸೂಚಿಸಲಾಗಿದೆ. ಅಂತೆಯೇ ಗ್ರಾಮ ಪಂಚಾಯಿತಿಯ 14 ಮತ್ತು 15 ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಜಿಲ್ಲೆಯಲ್ಲಿ 92 ಬೋರ್ ಕೊರೆಸಲಾಗಿದ್ದು 63 ಯಶಸ್ವಿಯಾಗಿದೆ. 109 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಯಾವ್ಯಾವ ತಾಲೂಕಿನಲ್ಲಿ ಎಷ್ಟು ಕಡೆ ನೀರು ಪೂರೈಕೆ?

ಶಿವಮೊಗ್ಗ ತಾಲ್ಲೂಕಿನಲ್ಲಿ 8 ಕೊಳವೆ ಬಾವಿ ಕೊರೆಸಲಾಗಿದ್ದು 5 ಯಶಸ್ವಿಯಾಗಿವೆ. ತಾಲ್ಲೂಕಿನ 4 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ಭದ್ರಾವತಿ ತಾಲ್ಲೂಕಿನಲ್ಲಿ 2 ಬೋರ್ ತೆಗೆಸಲಾಗಿದ್ದು 1 ಯಶಸ್ವಿಯಾಗಿದೆ. 8 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ನೀಡಲಾಗುತ್ತಿದೆ.

ಸೊರಬ ತಾಲ್ಲೂಕಿನಲ್ಲಿ 10 ಬೋರ್ ಕೊರೆಸಲಾಗಿದ್ದು 8 ಯಶಸ್ವಿಯಾಗಿವೆ. 5 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ನೀಡಲಾಗುತ್ತಿದೆ.

ಇದನ್ನೂ ಓದಿ – ಶಿವಮೊಗ್ಗಕ್ಕೆ ಸಿಗಲಿಲ್ಲ ಮೊದಲ ಪ್ರಾಶಸ್ತ್ಯ, ಮುನಿಸಿಕೊಂಡರಾ ಶಾಸಕ ಮಧು ಬಂಗಾರಪ್ಪ?

ತೀರ್ಥಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ 30 ಬೋರ್ ಕೊರೆಸಿದ್ದು 22 ಯಶಸ್ವಿಗಾಗಿದೆ. 12 ಗಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗಿದೆ.

ಹೊಸನಗರ ತಾಲ್ಲೂಕಿನ 5 ಬೋರ್ ಕೊರೆಸಲಾಗಿದ್ದು 3 ಯಶಸ್ವಿಯಾಗಿದೆ. 40 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ನೀಡಲಾಗುತ್ತಿದೆ.

ಸಾಗರ ತಾಲ್ಲೂಕಿನಲ್ಲಿ 7 ರಲ್ಲಿ 3 ಬೋರ್ ಯಶಸ್ವಿಯಾಗಿದ್ದು 35 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ನೀಡಲಾಗುತ್ತಿದೆ.

ಶಿಕಾರಿಪುರ ತಾಲ್ಲೂಕಿನಲ್ಲಿ 30 ಬೋರ್ ಕೊರೆಸಿದ್ದು 21 ಯಶಸ್ವಿಯಾಗಿದೆ. 5 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ನೀಡಲಾಗುತ್ತಿದೆ.

SHIVAMOGGA LIVE NITIN KAIDOTLU QUOTE jpg

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment