SHIVAMOGGA LIVE NEWS | 4 MAY 2024
ELECTION NEWS : ಶಿವಮೊಗ್ಗದಲ್ಲಿ ಲೋಕಸಭೆ ಚುನಾವಣೆ ನಡುವೆ ವಿಧಾನ ಪರಿಷತ್ತಿನ ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರಕ್ಕೆ ಚುನಾವಣೆ ಕಾವು ಏರುತ್ತಿದೆ. ಜೂನ್ 3ರಂದು ಇವೆರಡೂ ಕ್ಷೇತ್ರದ ಚುನಾವಣೆ ನಡೆಯಲಿದೆ. ಈ ಸಂಬಂಧ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇವತ್ತು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಇವೆರಡು ಕ್ಷೇತ್ರದ ಚುನಾವಣೆಗೆ ಮೇ 9ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ. ಮೇ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 3ರಂದು ಮತದಾನ ನಡೆಯಲಿದೆ. ಜೂ.6ರಂದ ಮತ ಎಣಿಕೆ ಕಾರ್ಯ ನಡೆಯಲಿದೆ.
ಎಷ್ಟಿದ್ದಾರೆ ಮತದಾರರು?
ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಶಿವಮೊಗ್ಗದಲ್ಲಿ 2324 ಪುರುಷ, 1583 ಮಹಿಳೆಯರು ಸೇರಿದ ಒಟ್ಟು 3907 ಮತದಾರರು ಇದ್ದಾರೆ. ನೈಋತ್ಯ ಪದವೀಧರರು ಕ್ಷೇತ್ರದಲ್ಲಿ 23902 ಮತದಾರರು ಇದ್ದಾರೆ. ಈ ಪೈಕಿ 13524 ಪುರುಷ, 10375 ಮಹಿಳಾ ಮತದಾರರು, ಇತರರು 3 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪಟ್ಟಿಗೆ ಹೆಸರು ಸೇರಿಸಲು ಅವಕಾಶ
ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಅವಕಾಶವಿದೆ. ಮೇ 6ರ ಸಂಜೆ 5.30ರವರಗೆ ಅಗತ್ಯ ದಾಖಲೆಗಳ ಸಹಿತ, ಅರ್ಜಿಯನ್ನು ಸಹಾಯಕ ಮತದಾರರ ನೋಂದಣಾಧಿಕಾರಿಗೆ ಸಲ್ಲಿಸಬಹುದಾಗಿದೆ ಎಂದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಾಳೆಯಿಂದ ಪಾಲಿಸಲೆಬೇಕು ಈ 6 ಮಾರ್ಗಸೂಚಿ, ಏನೇನದು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200