ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಮೇ 2020
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಹತ್ತು ಮಂದಿಗೆ ಕರೋನ ಪಾಸಿಟಿವ್ ಬಂದಿದೆ ಎಂದು ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಸ್ಪಷ್ಟಪಡಿಸಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಾರಿಗೆಲ್ಲ ಕರೋನ ಪಾಸಿಟಿವ್ ಬಂದಿದೆ?
ಪೇಷೆಂಟ್ ನಂಬರ್ 1297 | 39 ವರ್ಷದ ಪುರುಷ| ಮುಂಬೈನಿಂದ ಶಿವಮೊಗ್ಗಕ್ಕೆ ಬಂದಿದ್ದಾರೆ | ಇವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.
ಪಿ1298 | 34 ವರ್ಷದ ಮಹಿಳೆ | ಮುಂಬೈನಿಂದ ಶಿವಮೊಗ್ಗಕ್ಕೆ ಬಂದಿದ್ದಾರೆ | ಇವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.
ಪಿ1299 | 13 ವರ್ಷದ ಬಾಲಕ | ಮುಂಬೈನಿಂದ ಶಿವಮೊಗ್ಗಕ್ಕೆ ಬಂದಿದ್ದಾರೆ | ಇವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.
ಪಿ1300 | 20 ವರ್ಷ ಪುರುಷ | ಆಂಧ್ರದಿಂದ ಶಿವಮೊಗ್ಗಕ್ಕೆ ಬಂದಿದ್ದಾರೆ | ಇವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.
ಪಿ1301 | 29 ವರ್ಷದ ಪುರುಷ | ಮುಂಬೈನಿಂದ ಶಿವಮೊಗ್ಗಕ್ಕೆ ಬಂದಿದ್ದಾರೆ | ಇವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.
ಪಿ1302 | 39 ವರ್ಷದ ಮಹಿಳೆ | ಕೇರಳದಿಂದ ಶಿವಮೊಗ್ಗಕ್ಕೆ ಬಂದಿದ್ದಾರೆ | ಇವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.
ಪಿ1303 | 12 ವರ್ಷದ ಬಾಲಕ | ಕೇರಳದಿಂದ ಶಿವಮೊಗ್ಗಕ್ಕೆ ಬಂದಿದ್ದಾರೆ | ಇವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.
ಪಿ1304 | 15 ವರ್ಷದ ಬಾಲಕಿ | ಸೋಂಕು ತಗುಲಿದ್ದು ಹೇಗೆ ಎಂದು ಪತ್ತೆ ಹಚ್ಚಲಾಗುತ್ತಿದೆ.
ಪಿ1305 | 63 ವರ್ಷದ ಪುರುಷ | ಸೋಂಕು ತಗುಲಿದ್ದು ಹೇಗೆ ಎಂದು ಪತ್ತೆ ಹಚ್ಚಲಾಗುತ್ತಿದೆ.
ಪಿ1308 | 28 ವರ್ಷದ ಪುರುಷ| ಮುಂಬೈನಿಂದ ಶಿವಮೊಗ್ಗಕ್ಕೆ ಬಂದಿದ್ದಾರೆ | ಇವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.
ಗೊಂದಲಕ್ಕೆ ಕೊನೆಗೂ ತೆರೆ
ಸೋಮವಾರ ರಾತ್ರಿಯಿಂದಲೆ ಸೋಂಕಿತರ ಸಂಖ್ಯೆ ಕುರಿತು ಗೊಂದಲ ನಿರ್ಮಾಣವಾಗಿತ್ತು. ಕೆಲವು ಸುದ್ದಿ ವಾಹಿನಿಗಳಲ್ಲಿ ಹತ್ತು ಮಂದಿಗೆ ಸೋಂಕು ಎಂದು ಪ್ರಕಟಿಸಲಾಗಿತ್ತು. ಇನ್ನು ಕೆಲವು ವಾಹಿನಿಗಳಲ್ಲಿ 9 ಮಂದಿಗೆ ಸೋಂಕು ಎಂದು ವರದಿ ಪ್ರಕಟವಾಗಿತ್ತು. ಈ ಕುರಿತು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಪಷ್ಟಪಡಿಸಿರಲಿಲ್ಲ. ಇದೀಗ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬುಲೆಟಿನ್‍ನಲ್ಲಿ ಒಂಭತ್ತು ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]