ಮುಂಬೈಗೆ ತೆರಳಿದ್ದ ಮಹಿಳೆಗೆ ನೆರೆಹೊರೆ ಮನೆಯಿಂದ ಬಂತು ಫೋನ್‌, ವಾಪಸಾದಾಗ ಕಾದಿತ್ತು ಶಾಕ್

ಶಿವಮೊಗ್ಗ: ನಗರದ ಸ್ವಾಮಿ ವಿವೇಕಾನಂದ ಬಡಾವಣೆಯ ಮನೆಯೊಂದರ ಬೀಗ ಮುರಿದು ಸುಮಾರು ₹7.99 ಲಕ್ಷ ಮೌಲ್ಯದ ಚಿನ್ನಾಭರಣ (gold), ಬೆಳ್ಳಿ ವಸ್ತುಗಳು ಹಾಗೂ ನಗದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಮನೆಯ ಮಾಲೀಕರಾದ ವಿಜಯಲಕ್ಷ್ಮೀ ಅವರು ಮುಂಬೈಗೆ ಹೋಗಿದ್ದಾಗ ಮುಂಬಾಗಿಲಿನ ಇಂಟರ್ ಲಾಕ್ ಮುರಿದ ಕಳ್ಳರು ಒಳಪ್ರವೇಶಿಸಿದ್ದಾರೆ ಎಂದು ಆರೋಪಿಸಲಾಗಿದೆ.  

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ 12‌ ಸುದ್ದಿಗಳು

ಅಲ್ಮೇರಾದಲ್ಲಿದ್ದ 102 ಗ್ರಾಂ ಚಿನ್ನದ ಆಭರಣ, 200 ಗ್ರಾಂ ಬೆಳ್ಳಿ ವಸ್ತು, ಎರಡು ವಾಚ್‌ಗಳು ಹಾಗೂ ಸುಮಾರು ₹71,000 ನಗದು ದೋಚಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Theft-at-a-house-in-Shimoga-city

ವಿಜಯಲಕ್ಷ್ಮೀ ಅವರು ಮನೆಗೆ ಬೀಗ ಹಾಕಿಕೊಂಡು ಮುಂಬೈಗೆ ತೆರಳಿದ್ದರು. ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿದ ನೆರೆಹೊರೆಯವರು ವಿಜಯಲಕ್ಷ್ಮಿ ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಮುಂಬೈನಿಂದ ಶಿವಮೊಗ್ಗಕ್ಕೆ ಹಿಂತಿರುಗಿದ ಅವರು ಮನೆಯನ್ನು ಪರಿಶೀಲಿಸಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : January 21, 2026 at 9:20 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜನವರಿ 21, 2026

Leave a Comment