ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಜುಲೈ 2021
ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್‍ನಿಂದ ಮೃತಪಟ್ಟವರ ಸಂಖ್ಯೆ ಇವತ್ತಿಗೆ ಒಂದು ಸಾವಿರಕ್ಕೆ ತಲುಪಿದೆ. ಇವತ್ತು ಜಿಲ್ಲೆಯಲ್ಲಿ ಮೂವರು ಕರೋನಾಗೆ ಬಲಿಯಾಗಿದ್ದಾರೆ. ಇದರಿಂದ ಈತನಕ ಮೃತಪಟ್ಟವರ ಸಂಖ್ಯೆ ಸರಿಯಾಗಿ ಒಂದು ಸಾವಿರಕ್ಕೆ ತಲುಪಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ.
ಮೊದಲ ಅಲೆಯಲ್ಲಿ ಕರೋನಾಗೆ 349 ಮಂದಿ ಬಲಿಯಾಗಿದ್ದರು. ಎರಡನೆ ಅಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಳವಾಗಿದ್ದು, ಇವತ್ತು ಸಾವಿರಕ್ಕೆ ತಲುಪಿದೆ.
ಇನ್ನು, ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 97 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 36 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 24 ಮಂದಿ, ತೀರ್ಥಹಳ್ಳಿ 7, ಶಿಕಾರಿಪುರದಲ್ಲಿ 3, ಸಾಗರದಲ್ಲಿ 15, ಹೊಸನಗರದಲ್ಲಿ 4, ಸೊರಬದಲ್ಲಿ ಒಬ್ಬರು, ಇತರೆ ಜಿಲ್ಲೆಯಿಂದ ಬಂದಿರುವ 7 ಮಂದಿಗೆ ಪಾಸಿಟಿವ್ ಬಂದಿದೆ.
ಇನ್ನೂ, ಜಿಲ್ಲೆಯಲ್ಲಿ ಇವತ್ತು 132 ಮಂದಿ ಗುಣವಾಗಿದ್ದು, ಬಿಡುಗಡೆ ಹೊಂದಿದ್ದಾರೆ. ಕರೋನ ಕಂಟ್ರೋಲ್ ಬಂದಿದೆ ಎಂದು ರಾಜ್ಯ ಸರ್ಕಾರ ಲಾಕ್ ಡೌನ್ ತೆರವು ಮಾಡಿದೆ. ಆದರೆ ಸೋಂಕು ಸಂಪೂರ್ಣ ಮರೆಯಾಗಿಲ್ಲ. ಜನರು ಸ್ವಲ್ಪ ಯಾಮಾರಿದರೂ ಮತ್ತಷ್ಟು ಆತಂಕ ಸೃಷ್ಟಿಯಾಗಲಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422