ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021
ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಒಂದು ಸಾವಿರಕ್ಕೂ ಹೆಚ್ಚು ಗಣಪತಿ ಮೂರ್ತಿಗಳ ವಿಸರ್ಜನೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪೊಲೀಸ್ ಬಂದೋಬಸ್ತ್ ಹೆಚ್ಚಳ ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾರ್ವಜನಿಕ ಸ್ಥಳಗಳಲ್ಲಿ ಜಿಲ್ಲೆಯಾದ್ಯಂತ ಪ್ರತಿಷ್ಠಾಪಿಸಲಾಗಿರುವ 1,036 ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗುತ್ತಿದೆ.
ಈ ವರ್ಷ ಎಷ್ಟು ಗಣಪತಿ ಪ್ರತಿಷ್ಠಾಪಿಸಲಾಗಿದೆ?
ಗಣಪತಿ ಪ್ರತಿಷ್ಠಾಪನೆಗೆ ಸರ್ಕಾರ ಕಠಿಣ ನಿಯಮ ಜಾರಿಗೊಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಈ ನಿಯಮ ಪಾಲನೆ ಕಡ್ಡಾಯಗೊಳಿಸಲಾಗಿದೆ. ಅದರಂತೆ ಅನುಮತಿ ಪಡೆದು ಜಿಲ್ಲೆಯಲ್ಲಿ 2,278 ಗಣಪತಿ ಮೂರ್ತಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲಾಗಿತ್ತು.
ಶಿವಮೊಗ್ಗ ತಾಲೂಕಿನಲ್ಲಿ 521, ಭದ್ರಾವತಿಯಲ್ಲಿ 419, ತೀರ್ಥಹಳ್ಳಿ 208, ಹೊಸನಗರ 206, ಸಾಗರ 358, ಶಿಕಾರಿಪುರದಲ್ಲಿ 268, ಸೊರಬದಲ್ಲಿ 298 ಗಣಪತಿ ಮೂರ್ತಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲಾಗಿದೆ.
ಮೊದಲ ದಿನ 905 ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ. ಸೆಪ್ಟೆಂಬರ್ 12ರಂದು 1,036 ವಿಸರ್ಜನೆ, 5ನೇ ದಿನ 529 ಮೂರ್ತಿಗಳ ವಿಸರ್ಜಿಸಲಾಗುತ್ತದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200