ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 3 ಜನವರಿ 2020
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಬೆದರಿಕೆ ಕರೆ ಬಂದಿದೆ. ಮಧ್ಯಾಹ್ನದ ವೇಳೆಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಪ್ರಾಣಪಾಯದ ವಾರ್ನಿಂಗ್ ನೀಡಿದ್ದಾನೆ.
ಬೆದರಿಕೆ ಕರೆ ಬಂದಿರುವ ಕುರಿತು ಸಚಿವ ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಮಾಹಿತಿ ನೀಡಿದ್ದಾರೆ. ತಮಿಳುನಾಡಿನಿಂದ ಕರೆ ಬಂದಿರುವ ಬಗ್ಗೆ ತಿಳಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ದೂರು ನೀಡುವ ಸಾದ್ಯತೆ ಇದೆ.
ಸಚಿವರಿಗೆ ಬೆದರಿಕೆ ಬಂದಿರುವ ಕುರಿತು ಪ್ರತಿಕ್ರಿಯೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು, ಸಚಿವರಿಗೆ ಬೆದರಿಕೆ ಕರೆ ಬಂದಿರುವ ಕುರಿತು ತಿಳಿಸಿದ್ದಾರೆ. ಆ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.
ಈ ಹಿಂದೆ ದುಬೈನಿಂದ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಈಶ್ವರಪ್ಪ ಅವರಿಗೆ ಬೆದರಿಕೆ ಹಾಕಿದ್ದ. ಈ ಸಂಬಂಧ ಈಶ್ವರಪ್ಪ ಅವರು ದೂರು ನೀಡಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422