ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2020
ಬೆಂಗಳೂರಿನಿಂದ ಬಂದ ಇಬ್ಬರು ಸೇರಿ ಶಿವಮೊಗ್ಗದಲ್ಲಿ ಮತ್ತೆ ಮೂವರಿಗೆ ಕರೋನ ಸೋಂಕು ತಗುಲಿದೆ. ಇದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 176ಕ್ಕೆ ಏರಿಕೆಯಾಗಿದೆ.

ಯಾರಿಗೆಲ್ಲ ಸೋಂಕು ತಗುಲಿದೆ?
ಪಿ15352 | 40 ವರ್ಷದ ಪುರುಷ | ಐಎಲ್‍ಐ
ಪಿ15353 | 27 ವರ್ಷದ ಪುರುಷ | ಬೆಂಗಳೂರಿನಿಂದ ಹಿಂತಿರುಗಿದ್ದರು
ಪಿ15354 | 41 ವರ್ಷದ ಪುರುಷ | ಬೆಂಗಳೂರಿನಿಂದ ಹಿಂತಿರುಗಿದ್ದರು.
ಯಾವ ಊರಿನವರು?
ಶೀತಜ್ವರದಿಂದ ಬಳಲುತ್ತಿರುವ 40 ವರ್ಷದ ಪಿ15352 ಭದ್ರಾವತಿಯವರು. ಇವರಲ್ಲಿ ಶೀತ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ವ್ಯಾಬ್ ಟೆಸ್ಟ್‍ಗೆ ಒಳಪಡಿಸಿದಾಗ ಕರೋನ ಸೋಂಕು ತಗುಲಿರುವುದು ದೃಢವಾಗಿದೆ.
27 ವರ್ಷದ ಸಾಗರದ ಯುವಕ ಮತ್ತು 41 ವರ್ಷದ ಸೊರಬದ ವ್ಯಕ್ತಿ ಬೆಂಗಳೂರಿಗೆ ಹೋಗಿ ಹಿಂತಿರುಗಿದ್ದರು. ಇವರಿಗೆ ಸೋಂಕು ತಗುಲಿದ್ದು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಎಷ್ಟಾಯ್ತು ಸೋಂಕಿತರ ಸಂಖ್ಯೆ?
ಶಿವಮೊಗ್ಗದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 176ಕ್ಕೆ ಏರಿಕೆಯಾಗಿದೆ. ಈ ಪೈಕಿ 109 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 65 ಸೋಂಕಿತರಿಗೆ ಚಿಕಿತ್ಸೆ ನಡೆಯುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200