ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 28 JULY 2023
BENGALURU : ಶಿವಮೊಗ್ಗ ವಿಮಾನ ನಿಲ್ದಾಣದಿಂದ (Airport) ಆಗಸ್ಟ್ 31ರಿಂದ ತನ್ನ ಕಾರ್ಯಾಚರಣೆ ಆರಂಭಿಸಲಿದೆ. ಈ ಮುಂಚೆ ಆಗಸ್ಟ್ 11ರಿಂದ ವಿಮಾನಯಾನ ಆರಂಭಕ್ಕೆ ದಿನಾಂಕ ನಿಗದಿಯಾಗಿತ್ತು. ತಾಂತ್ರಿಕ ಕಾರಣಗಳಿಂದ 31ಕ್ಕೆ ಹೋಗಿದ್ದು ಇಂಡಿಗೊ ಏರ್ ಲೈನ್ಸ್ ತನ್ನ ಬುಕ್ಕಿಂಗ್ ಆರಂಭಿಸಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಗೋವಾ, ತಿರುಪತಿಗೂ ಸಂಪರ್ಕ
ಶಿವಮೊಗ್ಗದಿಂದ ತಿರುಪತಿ, ಗೋವಾ ಮತ್ತು ಹೈದರಾಬಾದ್ ನಗರಗಳಿಗೆ ಉಡಾನ್ ಯೋಜನೆಯಡಿ ವಿಮಾನಯಾನ ಸೇವೆ ನೀಡಲು ಮೂರು ಏರ್ ಲೈನ್ಸ್ ಸಂಸ್ಥೆಗಳಿಗೆ ಅನುಮತಿ ಸಿಕ್ಕಿದೆ ಎಂದೂ ಸಚಿವರು ತಿಳಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಟೆಂಡರ್‌ನಲ್ಲಿ ಮೂರು ವಿಮಾನ ಸಂಸ್ಥೆ
ಸ್ಪೈಸ್ ಜೆಟ್, ಸ್ಟಾರ್ ಏರ್ ಲೈನ್ಸ್ ಮತ್ತು ಅಲಯನ್ಸ್ ಏರ್ ಸಂಸ್ಥೆಗಳು ಈ ರಹದಾರಿಗಳಲ್ಲಿ ವಿಮಾನ ಸಂಚಾರ ಮಾಡುವ ಸಂಬಂಧ ಕರೆದಿದ್ದ ಟೆಂಡರ್ ನಲ್ಲಿ ಭಾಗವಹಿಸಿ ಯಶಸ್ವಿಯಾಗಿವೆ ಎಂದು ತಿಳಿಸಿದರು.
ನೈಟ್ ಲ್ಯಾಂಡಿಂಗ್ ಕಾಮಗಾರಿ ಪ್ರಗತಿ
ಸದ್ಯಕ್ಕೆ ಹಗಲು ವೇಳೆಯ ವಿಮಾನ ಸಂಚಾರ ಮಾತ್ರ ಇರುತ್ತದೆ. ರಾತ್ರಿ ವೇಳೆ ಲ್ಯಾಂಡಿಂಗ್ ವ್ಯವಸ್ಥೆಗೆ (Airport) ಸಂಬಂಧಿಸಿದ ಕಾಮಗಾರಿ ಪ್ರಗತಿಯಲ್ಲಿದ್ದು ಆದಷ್ಟು ಬೇಗ ಮುಗಿಯಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ವಿವರಿಸಿದರು.
ಇದನ್ನೂ ಓದಿ – ಶಿವಮೊಗ್ಗ – ಬೆಂಗಳೂರು ವಿಮಾನದ ಟಿಕೆಟ್ ಬುಕಿಂಗ್ ಆರಂಭ, ಎಷ್ಟಿದೆ ದರ? ಬುಕ್ ಮಾಡುವುದು ಹೇಗೆ?
ಉಡಾನ್ ಯೋಜನೆಯಡಿ ಅನುಮತಿ ಪಡೆದಿರುವ ವಿಮಾನಯಾನ ಸಂಸ್ಥೆಗಳು ವಿಮಾನ ಸಂಚಾರಕ್ಕೆ ಸಿದ್ಧತೆ ನಡೆಸಿದ್ದು, ನಾಗರಿಕ ವಿಮಾನಯಾನ ನಿರ್ದೇಶನಾಲಯದ ಅನುಮತಿ ಸಿಕ್ಕ ನಂತರ ಅವುಗಳು ಕಾರ್ಯಾಚರಣೆ ನಡೆಸಲಿವೆ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದರು.