SHIVAMOGGA LIVE NEWS | 26 ಮಾರ್ಚ್ 2022
ಕುವೆಂಪು ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ.ಜೆ.ಗಿರೀಶ್, ರಾಷ್ಟ್ರ ಮಟ್ಟದ ಮೆಕಾನಿಕಲ್ ಮತ್ತು ಏರೋಸ್ಪೇಸ್ ಇಂಜಿನಿಯರಿಂಗ್ ವಿಭಾಗದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
![]() |
2014ರಿಂದ ಈ ವಿಷಯಗಳ ಸಂಶೋಧನೆ ಕುರಿತಂತೆ ವಿಶ್ವಾಸಾರ್ಹ ದತ್ತಾಂಶ ನೀಡುತ್ತಾ ಬಂದಿರುವ ರಿಸರ್ಚ್ ಡಾಟ್ ಕಾಂ ಹೊರತಂದಿರುವ ನೂತನ ರಾಂಕಿಂಗ್ ಪಟ್ಟಿಯಲ್ಲಿ ಈ ಮಹತ್ವದ ಸಾಧನೆ ಮಾಡಿದ್ದಾರೆ. 2021ರ ಡಿಸೆಂಬರ್ ತಿಂಗಳ ವರೆಗಿನ ಸಂಶೋಧನಾ ಪ್ರಕಟಣೆಗಳು ಮತ್ತು ಉಲ್ಲೇಖಗಳನ್ನೊಳಗೊಂಡ ಹೆಚ್ ಇಂಡೆಕ್ಸ್ ಆಧರಿಸಿ ರಾಂಕಿಂಗ್ ಪಟ್ಟಿ ಸಿದ್ಧ ಪಡಿಸಲಾಗಿದೆ.
ಕಳೆದ ಕೆಲವು ವರ್ಷಗಳಿಂದೀಚೆಗೆ ರಾಷ್ಟ್ರ ಮಟ್ಟದ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯ ವಿಜ್ಞಾನಿಯಾಗಿ ಗುರುತಿಸಿಕೊಂಡಿರುವ ಪ್ರೊ. ಬಿ.ಜೆ.ಗಿರೀಶ್ ಅವರ ಸಂಶೋಧನಾ ಕೊಡುಗೆ ಹೀಗೇ ಮುಂದುವರೆಯಲಿ ಮತ್ತು ಇತರ ಸಂಶೋಧಕರಿಗೆ ಸ್ಪೂರ್ತಿಯಾಗಲಿ ಎಂದು ಕುಲಪತಿ ಪ್ರೊ. ಬಿ ಪಿ ವೀರಭದ್ರಪ್ಪ ಹಾಗೂ ಕುಲಸಚಿವೆ ಜಿ ಅನುರಾಧ ಹಾರೈಸಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200