ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 APRIL 2021
ಲಾಕ್‍ಡೌನ್ ಮಾದರಿ ಕರ್ಫ್ಯೂ ವೇಳೆ ಅನಗತ್ಯವಾಗಿ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸಲು ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಸನ್ನದ್ಧವಾಗಿದೆ. ಕಟ್ಟುನಿಟ್ಟು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು, ಅನಗತ್ಯವಾಗಿ ಜನ ರಸ್ತೆಗಿಳಿಯುವುದನ್ನು ತಡೆಯಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
ಶಿವಮೊಗ್ಗ ನಗರದಲ್ಲಿ ಪ್ರದೇಶವಾರು ಬ್ಯಾರಿಕೇಡ್ ಹಾಕಲಾಗುತ್ತದೆ. ಅನಗತ್ಯವಾಗಿ ಓಡಾಡುವವರನ್ನು ತಡೆಯಲು ಇದರು ಸಹಕಾರಿ.
ವೀಕೆಂಡ್ ಕರ್ಫ್ಯೂ ಮಾದರಿಯಲ್ಲೇ ಲಾಕ್‍ಡೌನ್ ಮಾಡಲು ಯೋಜಿಸಲಾಗಿದೆ.
ಬೆಳಗ್ಗೆ 6 ರಿಂದ 10 ಗಂಟೆವರೆಗೆ ಯಾವೆಲ್ಲ ಅಂಗಡಿಗಳ ಬಾಗಿಲು ತೆಗೆಯಲು ಅವಕಾಶವಿದೆಯೋ ಅಂತಹ ಅಂಗಡಿಗಳು ಮಾತ್ರ ವ್ಯಾಪಾರ ನಡೆಸಬಹುದು.
ಅವಧಿ ಮೀರಿ, ಸರ್ಕಾರ ಘೊಷಿಸಿದ ಚಟುವಟಿಕೆ ಹೊರತು ಬೇರೆಯವರು ಅಂಗಡಿ ತೆಗೆಯುವುದು, ಚಟುವಟಿಕೆ ನಡೆಸಿದರೆ ಪೊಲೀಸರು ಎಫ್‍ಐಆರ್ ದಾಖಲಿಸುತ್ತಾರೆ. ಇದಕ್ಕೆ ಯಾರೂ ಆಸ್ಪದ ಕೊಡಬಾರದು.
ವೀಕೆಂಡ್ ಕರ್ಫ್ಯೂ ವೇಳೆ 58 ವಾಹನಗಳನ್ನ ಸೀಜ್ ಮಾಡಲಾಗಿದೆ. ಮುನ್ನೂರಕ್ಕಿಂತಲೂ ಹೆಚ್ಚು ವಾಹನಗಳ ಮೇಲೆ ಕೇಸ್ ಹಾಕಲಾಗಿದೆ. ಮಾಸ್ಕ್ ಕೇಸ್ ಮುಂದುವರೆಯಲಿದ್ದು, ಕಳೆದ ಮೂರು ದಿನದಲ್ಲಿ ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಕೇಸ್ ಹಾಕಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















