ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 DECEMBER 2020
ಲಾಕ್‍ಡೌನ್‍ನಿಂದಾಗಿ ಕಳೆಗುಂದಿದ್ದ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳು, ಸಾಲು ಸಾಲು ರಜೆಯಿಂದಾಗಿ ಪ್ರವಾಸಿಗರಿಂದ ತುಂಬಿ ಹೋಗಿದ್ದವು. ಇದರಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಪುನಶ್ಚೇತನಗೊಂಡಿದೆ. ಅಲ್ಲದೆ ದೊಡ್ಡ ಮಟ್ಟದ ಆದಾಯವನ್ನು ಗಳಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಡಿಸೆಂಬರ್ 25ರಂದು ಕ್ರಿಸ್‍ಮಸ್, 26ರಂದು ನಾಲ್ಕನೇ ಶನಿವಾರ, 27ರಂದು ಭಾನುವಾರ, ಸಾಲು ಸಾಲು ರಜೆ ಇತ್ತು. ಹಾಗಾಗಿ ದೂರದೂರುಗಳಿಂದ ಪ್ರವಾಸಿಗರು ಶಿವಮೊಗ್ಗದ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದರು.
ಎಲ್ಲೆಲ್ಲಿ ಹೇಗಿತ್ತು ಪ್ರವಾಸಿಗರ ರೆಸ್ಪಾನ್ಸ್
ಜೋಗ ಜಲಪಾತ | ಮೂರು ದಿನದಲ್ಲಿ ಸುಮಾರು 11 ಸಾವಿರ ಪ್ರವಾಸಿಗರು ಜೋಗ ಜಲಪಾತಕ್ಕೆ ಭೇಟಿ ನೀಡಿದ್ದಾರೆ. ಪ್ರವೇಶ ಶುಲ್ಕ, ವಾಹನ ಪಾರ್ಕಿಂಗ್ ಶುಲ್ಕ ಸೇರಿ 2.13 ಲಕ್ಷ ರೂ. ಆದಾಯ ಬಂದಿದೆ.
ಸಿಂಹಧಾಮ | ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೂ ದೊಡ್ಡ ಸಂಖ್ಯೆಯ ಪ್ರವಾಸಿಗರು ಆಗಮಿಸಿದ್ದರು. ಮೂರು ದಿನದಲ್ಲಿ 5,300 ಪ್ರವಾಸಿರು ಭೇಟಿ ನೀಡಿದ್ದರು. ಇದರಿಂದ 5.82 ಲಕ್ಷ ರೂ. ಆದಾಯ ಸಂಗ್ರಹವಾಗಿದೆ.
ಆನೆ ಬಿಡಾರ | ಸಕ್ರೆಬೈಲು ಆನೆ ಬಿಡಾರಕ್ಕೂ ಹೆಚ್ಚಿನ ಸಂಖ್ಯೆ ಪ್ರವಾಸಿಗರು ಭೇಟಿ ನೀಡಿದ್ದಾರೆ. ಮೂರು ದಿನದಲ್ಲಿ 1.89 ಲಕ್ಷ ರೂ. ಆದಾಯ ಸಂಗ್ರಹವಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕುಗಳ ವಿವಿಧ ಪ್ರವಾಸಿ ತಾಣಗಳಿಗೆ ದೊಡ್ಡ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]