ಸಾಲು ಸಾಲು ರಜೆ, ವರ್ಷಾಂತ್ಯದಲ್ಲಿ ಶಿವಮೊಗ್ಗಕ್ಕೆ ಪ್ರವಾಸಿಗರ ದಂಡು, ಎಲ್ಲೆಲ್ಲಿಗೆ ಎಷ್ಟೆಷ್ಟು ಪ್ರವಾಸಿಗರು ಬಂದಿದ್ದರು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 DECEMBER 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಲಾಕ್‍ಡೌನ್‍ನಿಂದಾಗಿ ಕಳೆಗುಂದಿದ್ದ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳು, ಸಾಲು ಸಾಲು ರಜೆಯಿಂದಾಗಿ ಪ್ರವಾಸಿಗರಿಂದ ತುಂಬಿ ಹೋಗಿದ್ದವು. ಇದರಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಪುನಶ್ಚೇತನಗೊಂಡಿದೆ. ಅಲ್ಲದೆ ದೊಡ್ಡ ಮಟ್ಟದ ಆದಾಯವನ್ನು ಗಳಿಸಿದೆ.

ಡಿಸೆಂಬರ್ 25ರಂದು ಕ್ರಿಸ್‍ಮಸ್, 26ರಂದು ನಾಲ್ಕನೇ ಶನಿವಾರ, 27ರಂದು ಭಾನುವಾರ, ಸಾಲು ಸಾಲು ರಜೆ ಇತ್ತು. ಹಾಗಾಗಿ ದೂರದೂರುಗಳಿಂದ ಪ್ರವಾಸಿಗರು ಶಿವಮೊಗ್ಗದ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದರು.

ಎಲ್ಲೆಲ್ಲಿ ಹೇಗಿತ್ತು ಪ್ರವಾಸಿಗರ ರೆಸ್ಪಾನ್ಸ್

ಜೋಗ ಜಲಪಾತ | ಮೂರು ದಿನದಲ್ಲಿ ಸುಮಾರು 11 ಸಾವಿರ ಪ್ರವಾಸಿಗರು ಜೋಗ ಜಲಪಾತಕ್ಕೆ ಭೇಟಿ ನೀಡಿದ್ದಾರೆ. ಪ್ರವೇಶ ಶುಲ್ಕ, ವಾಹನ ಪಾರ್ಕಿಂಗ್ ಶುಲ್ಕ ಸೇರಿ 2.13 ಲಕ್ಷ ರೂ. ಆದಾಯ ಬಂದಿದೆ.

ಸಿಂಹಧಾಮ | ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೂ ದೊಡ್ಡ ಸಂಖ್ಯೆಯ ಪ್ರವಾಸಿಗರು ಆಗಮಿಸಿದ್ದರು. ಮೂರು ದಿನದಲ್ಲಿ 5,300 ಪ್ರವಾಸಿರು ಭೇಟಿ ನೀಡಿದ್ದರು. ಇದರಿಂದ 5.82 ಲಕ್ಷ ರೂ. ಆದಾಯ ಸಂಗ್ರಹವಾಗಿದೆ.

ಆನೆ ಬಿಡಾರ | ಸಕ್ರೆಬೈಲು ಆನೆ ಬಿಡಾರಕ್ಕೂ ಹೆಚ್ಚಿನ ಸಂಖ್ಯೆ ಪ್ರವಾಸಿಗರು ಭೇಟಿ ನೀಡಿದ್ದಾರೆ. ಮೂರು ದಿನದಲ್ಲಿ 1.89 ಲಕ್ಷ ರೂ. ಆದಾಯ ಸಂಗ್ರಹವಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕುಗಳ ವಿವಿಧ ಪ್ರವಾಸಿ ತಾಣಗಳಿಗೆ ದೊಡ್ಡ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡಿದ್ದಾರೆ.

133177174 1033939480419295 8777605059549344421 n.jpg? nc cat=111&ccb=2& nc sid=730e14& nc ohc= EF6Q1I apEAX E2nkR& nc ht=scontent.fixe1 2

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment