ತಾಳಗುಪ್ಪ – ಬೆಂಗಳೂರು, ಯಶವಂತಪುರ – ಶಿವಮೊಗ್ಗ ರೈಲಿನ ಸಮಯದಲ್ಲಿ ವ್ಯತ್ಯಯ, ಯಾವಾಗ? ಯಾಕೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್‌.ಕಾಂ | ರೈಲ್ವೆ ಸುದ್ದಿ

ಮಲ್ಲಸಂದ್ರ ಮತ್ತು ಗುಬ್ಬಿ ನಡುವೆ ನಡೆಯುತ್ತಿರುವ ಇಂಜಿನಿಯರಿಂಗ್ ಕಾಮಗಾರಿ ಹಿನ್ನೆಲೆ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ತಾಳಗುಪ್ಪ ಹಾಗೂ ಶಿವಮೊಗ್ಗ ಮಾರ್ಗದ ಪ್ರಮುಖ ರೈಲುಗಳ ಸಂಚಾರ ಭಾಗಶಃ ರದ್ದು ಮತ್ತು ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಯಾವೆಲ್ಲಾ ರೈಲುಗಳ ಸಂಚಾರದಲ್ಲಿ ವ್ಯತ್ಯಯ?

ತಾಳಗುಪ್ಪ–ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 20652) ರೈಲು: ಅರಸೀಕೆರೆ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ. ಆಗಸ್ಟ್ 19, 22, 23 ಮತ್ತು 26 ರಂದು ಈ ರೈಲು ಅರಸೀಕೆರೆಯಲ್ಲಿಯೇ ತನ್ನ ಪ್ರಯಾಣ ಮುಕ್ತಾಯಗೊಳಿಸಲಿದೆ.

Prayanikare-Gamanisi-Indian-Railway-News

ಯಶವಂತಪುರ–ಶಿವಮೊಗ್ಗ ಟೌನ್ ಇಂಟರ್‌ಸಿಟಿ ಎಕ್ಸ್‌ಪ್ರೆಸ್ (20689) ರೈಲಿನ ಮಾರ್ಗ ಬದಲಾವಣೆ ಮಾಡಲಾಗಿದೆ. ಆಗಸ್ಟ್ 19, 22, 23 ಮತ್ತು 26 ರಂದು ಈ ರೈಲು ಚಿಕ್ಕಬಾಣಾವರ, ನೆಲಮಂಗಲ, ಹಾಸನ ಹಾಗೂ ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಈ ರೈಲಿಗೆ ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ವಿವಿಧ ರೈಲುಗಳ ಸೇವೆ ರದ್ದು

ಆಗಸ್ಟ್ 19 ಮತ್ತು 26 ರಂದು ಚಿಕ್ಕಮಗಳೂರು–ಯಶವಂತಪುರ (16239), ಯಶವಂತಪುರ–ಚಿಕ್ಕಮಗಳೂರು (16240), ಕೆಎಸ್ಆರ್ ಬೆಂಗಳೂರು–ಮೈಸೂರು ಒಡೆಯರ್ (12614), ಕೆಎಸ್ಆರ್ ಬೆಂಗಳೂರು–ತುಮಕೂರು ಮೆಮು (66567) ಹಾಗೂ ತುಮಕೂರು–ಕೆಎಸ್ಆರ್ ಬೆಂಗಳೂರು ಮೆಮು (66572) ರೈಲುಗಳು ರದ್ದಾಗಿವೆ. ಆಗಸ್ಟ್ 19, 22 ಮತ್ತು 26 ರಂದು ಯಲಹಂಕ–ಅರಸೀಕೆರೆ (66505) ಮತ್ತು ಅರಸೀಕೆರೆ–ಯಲಹಂಕ (66506) ಮೆಮು ರೈಲುಗಳ ಸಂಚಾರವೂ ಇರುವುದಿಲ್ಲ.

ಹಲವು ರೈಲುಗಳ ಮಾರ್ಗ ಬದಲಾವಣೆ

ವಾಸ್ಕೋ ಡ ಗಾಮ–ಯಶವಂತಪುರ ಎಕ್ಸ್‌ಪ್ರೆಸ್ (17310) ಹಾಗೂ ಮೈಸೂರು–ಬೆಳಗಾವಿ ವಿಶ್ವಮಾನವ ಎಕ್ಸ್‌ಪ್ರೆಸ್ (20676) ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಇವು ತಿಪಟೂರು ಮತ್ತು ತುಮಕೂರು ಬದಲಿಗೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.