ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

Published On : ಮಾರ್ಚ್ 23, 2026

Published By : ನಿತಿನ್‌ ಆರ್‌.ಕೈದೊಟ್ಲು 

ರೈಲ್ವೆ ಸುದ್ದಿ: ಮೈಸೂರು ಮತ್ತು ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ ಬೈಪಾಸ್ ನಡುವೆ ನಡೆಯುತ್ತಿರುವ ರಸ್ತೆ ಕೆಳಸೇತುವೆ ನಿರ್ಮಾಣ ಕಾಮಗಾರಿಯ ಹಿನ್ನೆಲೆ ನೈರುತ್ಯ ರೈಲ್ವೆ (trains) ಕೆಲವು ರೈಲು ಸೇವೆಗಳ ಪುನರ್ ಆರಂಭ ಹಾಗೂ ಭಾಗಶಃ ರದ್ದುಪಡಿಸುವುದಾಗಿ ತಿಳಿಸಿದೆ.

ರೈಲುಗಳ ಪುನಾರಂಭ

2026 ಮಾರ್ಚ್ 21 ಮತ್ತು 24 ರಂದು ಭಾಗಶಃ ರದ್ದುಪಡಿಸಲಾಗಿದ್ದ ಕೆಲವು ರೈಲುಗಳು ಈಗ ತಮ್ಮ ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿವೆ.

ರೈಲು ಸಂಖ್ಯೆ 56267 ಅರಸೀಕೆರೆ – ಮೈಸೂರು ಪ್ಯಾಸೆಂಜರ್: ಬೆಳಗುಳ ಮತ್ತು ಮೈಸೂರು ನಡುವೆ ಭಾಗಶಃ ರದ್ದುಪಡಿಸಲಾಗಿದ್ದ ಈ ರೈಲು ಮರು ಆರಂಭವಾಗಿದ್ದು ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿದೆ.

ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್: ಮೈಸೂರು ಮತ್ತು ಬೆಳಗುಳ ನಡುವೆ ಭಾಗಶಃ ರದ್ದುಪಡಿಸಲಾಗಿದ್ದ ಈ ರೈಲು ಮರು ಆರಂಭವಾಗಿದ್ದು ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿದೆ.

Train-Jan-Shatabdi-General-Image

ಎರಡು ದಿನ ರೈಲುಗಳು ಭಾಗಶಃ ರದ್ದು

ರಸ್ತೆ ಕೆಳಸೇತುವೆ ಕಾಮಗಾರಿ ಮುಂದುವರಿದಿರುವ ಹಿನ್ನೆಲೆ ಕೆಲವು ರೈಲುಗಳು 2026 ಮಾರ್ಚ್ 28 ಮತ್ತು 31 ರಂದು ಭಾಗಶಃ ರದ್ದುಪಡಿಸಲಾಗುವುದು.

ರೈಲು ಸಂಖ್ಯೆ 56267 ಅರಸೀಕೆರೆ – ಮೈಸೂರು ಪ್ಯಾಸೆಂಜರ್: ಬೆಳಗುಳ ಮತ್ತು ಮೈಸೂರು ನಡುವೆ ಭಾಗಶಃ ರದ್ದುಪಡಿಸಲಾಗುತ್ತದೆ ಹಾಗೂ ಬೆಳಗುಳದಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್: ಮೈಸೂರು ಮತ್ತು ಬೆಳಗುಳ ನಡುವೆ ಭಾಗಶಃ ರದ್ದುಪಡಿಸಲಾಗುತ್ತದೆ ಹಾಗೂ ಮೈಸೂರು ಬದಲಿಗೆ ಬೆಳಗುಳದಿಂದ ತನ್ನ ಪ್ರಯಾಣ ಆರಂಭಿಸಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 23, 2026

Leave a Comment