ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ತಪ್ಪಿದ ಅನಾಹುತ, RPF ಇನ್‌ಸ್ಪೆಕ್ಟರ್ ಸಾಹಸ, ಪ್ರಯಾಣಿಕ ಸೇಫ್‌, ಆಗಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

SHIVAMOGGA: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಸಮತೋಲನ ಕಳೆದುಕೊಂಡು ಬೀಳುತ್ತಿದ್ದ ಪ್ರಯಾಣಿಕರೊಬ್ಬರನ್ನು ಆರ್‌ಪಿಎಫ್ ಇನ್‌ಸ್ಪೆಕ್ಟರ್ ಸಮಯಪ್ರಜ್ಞೆಯಿಂದ ರಕ್ಷಿಸಿದ್ದಾರೆ. ನಿಲ್ದಾಣದ ಪ್ಲಾಟ್‌ಫಾರ್ಮ್ ನಂ.1 ರಲ್ಲಿ ಭಾನುವಾರ ಸಂಜೆ ರೈಲು ಹೊರಡುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಇದರ ವಿಡಿಯೋ ಕೆಳಗಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಹೇಗಾಯ್ತು ಘಟನೆ?

ರೈಲು ಚಲಿಸಲು ಆರಂಭವಾದ ನಂತರ ಪ್ರಯಾಣಿಕರೊಬ್ಬರು ಅದನ್ನು ಹತ್ತಲು ಪ್ರಯತ್ನಿಸಿದಾಗ ಸಮತೋಲನ ಕಳೆದುಕೊಂಡು ಪ್ಲಾಟ್‌ಫಾರ್ಮ್ ಮತ್ತು ಚಲಿಸುತ್ತಿದ್ದ ರೈಲಿನ ನಡುವಿನ ಅಂತರಕ್ಕೆ ಬೀಳುವ ಅಪಾಯದಲ್ಲಿದ್ದರು. ಈ ವೇಳೆ ಪ್ಲಾಟ್‌ಫಾರ್ಮ್‌ನಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಶಿವಮೊಗ್ಗ ಆರ್‌ಪಿಎಫ್ ಇನ್‌ಸ್ಪೆಕ್ಟರ್ ಬಿ.ಕೆ. ಪ್ರಕಾಶ ಅವರು ಕೂಡಲೇ ಧಾವಿಸಿ, ಪ್ರಯಾಣಿಕರನ್ನು ಸುರಕ್ಷಿತವಾಗಿ ಬೋಗಿಯೊಳಗೆ ತಳ್ಳಿದ್ದಾರೆ. ಇದರಿಂದಾಗಿ ಅನಹುತ ತಪ್ಪಿದೆ.

RPF-Inspector-Prakash-Saves-passanger-at-Shimoga-Railway-Station

ರೈಲ್ವೆ ನಿಲ್ದಾಣದ ಸಿಸಿಟಿವಿ ಕ್ಯಾಮರಾಗಳಲ್ಲಿ ದೃಶ್ಯ ಸೆರೆಯಾಗಿದೆ. ಇನ್‌ಸ್ಪೆಕ್ಟರ್ ಬಿ.ಕೆ. ಪ್ರಕಾಶ ಅವರು ದೂರದಿಂದ ಓಡಿ ಬಂದು ಪ್ರಯಾಣಿಕನರ ಜೀವ ರಕ್ಷಣೆ ಮಾಡಿದ್ದಾರೆ. ಇದರ ವಿಡಿಯೋ ಕೆಳಗಿದೆ: