ಸಂಕ್ರಾಂತಿಗೆ ಯಶವಂತಪುರ – ತಾಳಗುಪ್ಪ ಮಧ್ಯೆ ಎರಡು ವಿಶೇಷ ರೈಲು, ಯಾವ್ಯಾವ ದಿನ? ಟೈಮಿಂಗ್‌ ಏನು?

 ಶಿವಮೊಗ್ಗ  LIVE 

ಬೆಂಗಳೂರು: ಸಂಕ್ರಾಂತಿ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಿಕೊಡಲು ನೈರುತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು (Special Train) ಓಡಿಸಲು ನಿರ್ಧರಿಸಿದೆ.

ಜನವರಿ 13 ಮತ್ತು ಜನವರಿ 23ರಂದು ರಾತ್ರಿ 10.45ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 4.45ಕ್ಕೆ ತಾಳಗುಪ್ಪ ತಲುಪಲಿದೆ. ಜನವರಿ 14 ಮತ್ತು 24ರಂದು ಬೆಳಿಗ್ಗೆ 10ಕ್ಕೆ ತಾಳಗುಪ್ಪದಿಂದ ಹೊರಟು ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ. ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ವಿಶೇಷ ರೈಲುಗಳು ನಿಲುಗಡೆ ಹೊಂದಿವೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಿಂದ ಬೆಂಗಳೂರಿಗೆ ಎಷ್ಟು ರೈಲುಗಳಿವೆ? ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment