ಯಶವಂತಪುರ – ಶಿವಮೊಗ್ಗ ರೈಲು ಸೇರಿ ವಿವಿಧ ರೈಲುಗಳು ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ, ಯಾವ ದಿನ?

ರೈಲ್ವೆ ಸುದ್ದಿ: ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಹಿರೇಹಳ್ಳಿ ಯಾರ್ಡ್‌ನಲ್ಲಿ ಅತ್ಯಗತ್ಯ ಸುರಕ್ಷತಾ ಮತ್ತು ಸಿಗ್ನಲಿಂಗ್ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆ ಮೇ 20ರಂದು ವಿವಿಧ ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯಾವ್ಯಾವ ರೈಲುಗಳ ಸಂಚಾರದಲ್ಲಿ ಬದಲಾವಣೆ?

ರೈಲುಗಳ ಮಾರ್ಗ ಬದಲಾವಣೆ

ರೈಲು 1: ರೈಲು ಸಂಖ್ಯೆ 20689 ಯಶವಂತಪುರ–ಶಿವಮೊಗ್ಗ ಟೌನ್ ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು. ಮೇ 20 ರಂದು ಹೊರಡುವ ರೈಲು ಯಶವಂತಪುರ, ಚಿಕ್ಕಬಾಣಾವರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಹೀಗಾಗಿ ಈ ರೈಲು ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

Prayanikare-Gamanisi-Indian-Railway-News

ರೈಲು 2: ರೈಲು ಸಂಖ್ಯೆ 20676 ಮೈಸೂರು–ಬೆಳಗಾವಿ ವಿಶ್ವಮಾನವ ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು. ಮೇ 20ರಂದು ಹೊರಡುವ ಮೈಸೂರು, ಹೊಳೆನರಸೀಪುರ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಹೀಗಾಗಿ ಈ ರೈಲು ಪಾಂಡವಪುರದಿಂದ ತಿಪಟೂರಿನವರೆಗಿನ ಎಲ್ಲಾ ನಿಲ್ದಾಣಗಳ ನಿಲುಗಡೆಯನ್ನು ಇರುವುದಿಲ್ಲ.

ರೈಲುಗಳ ಭಾಗಶಃ ರದ್ದು

ರೈಲು 1: ರೈಲು ಸಂಖ್ಯೆ 66567 ಕೆಎಸ್ಆರ್ ಬೆಂಗಳೂರು–ತುಮಕೂರು ಮೆಮು ರೈಲು ಮೇ 20ರಂದು ದೊಡ್ಡಬೆಲೆ ಮತ್ತು ತುಮಕೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ರೈಲು ದೊಡ್ಡಬೆಲೆಯಲ್ಲಿ ಕೊನೆಗೊಳ್ಳಲಿದೆ.

ರೈಲು 2: ರೈಲು ಸಂಖ್ಯೆ 66572 ತುಮಕೂರು–ಕೆಎಸ್ಆರ್ ಬೆಂಗಳೂರು ಮೆಮು ರೈಲು ಮೇ 20ರಂದು ತುಮಕೂರು ಮತ್ತು ದೊಡ್ಡಬೆಲೆ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ತುಮಕೂರಿನ ಬದಲಾಗಿ ದೊಡ್ಡಬೆಲೆ ನಿಲ್ದಾಣದಿಂದ ನಿಗದಿತ ಸಮಯಕ್ಕೆ ತನ್ನ ಪ್ರಯಾಣ ಆರಂಭಿಸಲಿದೆ.

Prayanikare-Gamanisi-Indian-Railway-News

ರೈಲುಗಳ ನಿಯಂತ್ರಣ

ರೈಲು 1: ವೇಲಂಕಣಿಯಿಂದ ಹೊರಡುವ ರೈಲು ಸಂಖ್ಯೆ 17316 ಮೇ 19ರಂದು ವೇಲಂಕಣಿ–ವಾಸ್ಕೊ ಡ ಗಾಮ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಣಕ್ಕೊಳಪಡಲಿದೆ (ವಿಳಂಬವಾಗಲಿದೆ).

ರೈಲು 2: ಮೇ 20ರಂದು ತಮ್ಮ ಮೂಲ ನಿಲ್ದಾಣಗಳಿಂದ ಹೊರಡುವ ರೈಲುಗಳ ಸಂಖ್ಯೆ 12725 ಕೆಎಸ್ಆರ್ ಬೆಂಗಳೂರು–ಧಾರವಾಡ ಸಿದ್ದಗಂಗಾ ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹಾಗೂ 12649 ಯಶವಂತಪುರ–ಹಜರತ್ ನಿಜಾಮುದ್ದೀನ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳು ಮಾರ್ಗಮಧ್ಯೆ ತಲಾ 30 ನಿಮಿಷಗಳ ಕಾಲ ನಿಯಂತ್ರಿಸಲ್ಪಡಲಿವೆ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion