ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 MARCH 2023
SHIMOGA : ತೋಟಗಾರಿಕೆ ಇಲಾಖೆ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತರಬೇತಿ (Training) ಕಾರ್ಯಕ್ರಮ ಆಯೋಜಿಸಲಾಗಿದೆ. ಇದಕ್ಕೆ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2023ರ ಮೇ 2 ರಿಂದ 2024ರ ಫೆಬ್ರವರಿ 29ರವರೆಗೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಅರ್ಹತೆಗಳೇನು?
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾಗಿರಬೇಕು. ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತರು ಅರ್ಜಿಯನ್ನು ತೋಟಗಾರಿಕೆ ಇಲಾಖೆಯ ವೆಬ್ ಸೈಟ್ https://horticulturedir.karnataka.gov.in ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಶಿವಮೊಗ್ಗ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಆಯಾ ತಾಲ್ಲೂಕಿನಲ್ಲಿರುವ ತೋಟಗಾರಿಕೆ ಇಲಾಖೆಯ ಕಚೇರಿಗಳಿಂದ ಅರ್ಜಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು 2023ರ ಏಪ್ರಿಲ್ 12ರ ಒಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-222794 / 9964512759 ಗೆ ಸಂಪರ್ಕಿಸಬಹುದು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲಾಧಿಕಾರಿ ವಾಸ್ತವ್ಯಕ್ಕೆ ಗ್ರಾಮ ನಿಗದಿ, ಮಾ.18ರಂದು ಎಲ್ಲಿ ವಾಸ್ತವ್ಯ ಮಾಡಲಿದ್ದಾರೆ ಡಿಸಿ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP



