ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 26 JULY 2024 : ಗಾಳಿ, ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮರಗಳು (TREE) ಧರೆಗುರುಳಿವೆ, ಮನೆಗಳ ಗೊಡೆ ಕುಸಿದಿವೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಅಶೋಕ ನಗರ ಮರ ಬಿದ್ದು ಶಿವಮೊಗ್ಗದಲ್ಲಿ ಮನೆ ಜಖಂ ಶಿವಮೊಗ್ಗ ಲೈವ್.ಕಾಂ : ಭಾರಿ ಗಾಳಿ ಮಳೆಗೆ ಅಶೋಕ ನಗರದ ನರ್ಸಿಂಗ್ ಕ್ವಾರ್ಟರ್ಸ್ನಲ್ಲಿ ಮರ ಬುಡಮೇಲಾಗಿ ಮನೆ ಮೇಲೆ ಉರುಳಿದೆ. ಮನೆ ಸಂಪೂರ್ಣ ಜಖಂ ಆಗಿದೆ. ಮೆಗ್ಗಾನ್ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ರಾಧಮ್ಮ ಎಂಬುವವರ ಮನೆ ಮೇಲೆ ಮರ ಉರುಳಿದೆ. ಮನೆಯಲ್ಲಿದ್ದ ಮೂವರು ಅದೃಷ್ಟವಶಾತ್ ಪರಾಗಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಹಿಂಬದಿಯ ನರ್ಸಿಂಗ್ ಕ್ವಾರ್ಟರ್ಸ್ನಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಎಂಆರ್ಎಸ್ ಮಳೆಗೆ ಮನೆ ಗೋಡೆ ಕುಸಿತ ಶಿವಮೊಗ್ಗ ಲೈವ್.ಕಾಂ : ನಗರದ ಎಂಆರ್ಎಸ್ ಸಮೀಪದ ಎನ್.ಆರ್.ಪುರ ರಸ್ತೆಯಲ್ಲಿರುವ ಮೊದಲ ಅಡ್ಡರಸ್ತೆಯಲ್ಲಿ ಮನೆಯೊಂದರ ಗೋಡೆ ಕುಸಿದಿದೆ. ಭಾರಿ ಮಳೆಗೆ ನೂರ್ಜಾನ್ ಎಂಬುವವರ ಮನೆ ಗೋಡೆ ಕುಸಿದಿದೆ. ಮನೆಯಲ್ಲಿದ್ದವರಿಗೆ ಯಾವುದೆ ಅಪಾಯ ಸಂಭವಿಸಿಲ್ಲ.
ತೀರ್ಥಹಳ್ಳಿ
ರಸ್ತೆಗೆ ಅಡ್ಡಲಾಗಿ ಬಿದ್ದ ಮರ
ಶಿವಮೊಗ್ಗ ಲೈವ್.ಕಾಂ : ತೀರ್ಥಹಳ್ಳಿ ತಾಲೂಕು ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಂಬಡಿ ಸಮೀಪ ರಸ್ತೆಗೆ ಅಡ್ಡಲಾಗಿ ಮರ ಉರುಳಿದೆ. ಘಟನೆಯಲ್ಲಿ ವಿದ್ಯುತ್ ತಂತಿಗಳು ತುಂಡಾಗಿವೆ. ರಸ್ತೆಗೆ ಮರ ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.