ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ, ಅಲ್ಲಲ್ಲಿ ಧರೆಗುರುಳಿದ ಮರ, ರಸ್ತೆ ಮೇಲೆ ಹರಿದ ನೀರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಇವತ್ತು ಜೋರು ಮಳೆಯಾಗಿದೆ (Rainfall). ಹಲವೆಡೆ ಮರಗಳು ಧರೆಗುರುಳಿದ್ದು, ಆಸ್ತಿಪಾಸ್ತಿಗೆ ಹಾನಿಯಾಗಿದೆ. ಇನ್ನೊಂದೆಡೆ ಗುರುವಾರ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹಾಗಾಗಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆ ಇವತ್ತು ಜೋರು ಮಳೆಯಾಗಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳಗೆ ನಗರದಲ್ಲಿ ಭಾರಿ ಮಳೆಯಾಯಿತು. ಅಲ್ಲಲ್ಲಿ ರಸ್ತೆಗಳ ಮೇಲೆ ನೀರು ಹರಿದಿತ್ತು. ತಾಲೂಕು ಕಚೇರಿ ಮುಂಭಾಗ ಮರ ಬಿದ್ದು ರಸ್ತೆ ಬದಿಯಲ್ಲಿದ್ದ ಶೆಡ್‌ಗಳಿಗೆ ಹಾನಿಯಾಗಿದೆ.

ಶಿವಮೊಗ್ಗದ ಸಾಗರ ರಸ್ತೆಯಲ್ಲಿ ನೀರು.
ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಮಳೆ ನೀರು.

ಶಿವಮೊಗ್ಗ – ತೀರ್ಥಹಳ್ಳಿಯ ಹೆದ್ದಾರಿಯಲ್ಲಿ ಗಾಜನೂರಿನ ಚೆಕ್‌ಪೋಸ್ಟ್‌ ಸಮೀಪ ಆಲದ ಮರ ಧರೆಗುರುಳಿತ್ತು. ಇದರಿಂದ ಈ ರಸ್ತೆಯಲ್ಲಿ ಕೆಲವು ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು.

Tree-falls-to-Shimoga-Thirthahalli-Road-at-gajanuru
ಗಾಜನೂರು ಚೆಕ್‌ಪೋಸ್ಟ್‌ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಶಿವಮೊಗ್ಗ ಜಿಲ್ಲೆಯ ಹಲವು ಕಡೆ ಇವತ್ತು ಮಳೆಯಾಗಿದೆ. ಸಾಗರ, ತೀರ್ಥಹಳ್ಳಿ, ಹೊಸನಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಭಾರಿ ಮಳೆಯಾಗಿದೆ. ಭದ್ರಾವತಿಯ ವಿವಿಧೆಡೆಯು ಮಳೆಯಾಗಿದೆ.

ಶಿವಮೊಗ್ಗ ತಾಲೂಕು ಕಚೇರಿ ಮುಂಭಾಗ ಬುಡಮೇಲಾದ ಮರ.
ಶಿವಮೊಗ್ಗ ತಾಲೂಕು ಕಚೇರಿ ಮುಂಭಾಗ ಬುಡಮೇಲಾದ ಮರ.
ಸಾಗರದಲ್ಲಿ ಭಾರಿ ಮಳೆಗೆ ರೆಸ್ತೆ ಮೇಲೆ ಹರಿಯುತ್ತಿರುವ ನೀರು.
ಸಾಗರದಲ್ಲಿ ಭಾರಿ ಮಳೆಗೆ ರೆಸ್ತೆ ಮೇಲೆ ಹರಿಯುತ್ತಿರುವ ನೀರು.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಶಿವಮೊಗ್ಗದಲ್ಲಿ 2 ದಿನ ಕಾರು ಎಕ್ಸ್‌ಚೇಂಜ್‌ ಮೇಳ, ರೈತರು, ಸರ್ಕಾರಿ ನೌಕರರು, ಕಾರ್ಪೊರೇಟ್‌ ಉದ್ಯೋಗಿಗಳಿಗೆ ಭರ್ಜರಿ ಆಫರ್‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment