ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಇವತ್ತು ಜೋರು ಮಳೆಯಾಗಿದೆ (Rainfall). ಹಲವೆಡೆ ಮರಗಳು ಧರೆಗುರುಳಿದ್ದು, ಆಸ್ತಿಪಾಸ್ತಿಗೆ ಹಾನಿಯಾಗಿದೆ. ಇನ್ನೊಂದೆಡೆ ಗುರುವಾರ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹಾಗಾಗಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆ ಇವತ್ತು ಜೋರು ಮಳೆಯಾಗಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳಗೆ ನಗರದಲ್ಲಿ ಭಾರಿ ಮಳೆಯಾಯಿತು. ಅಲ್ಲಲ್ಲಿ ರಸ್ತೆಗಳ ಮೇಲೆ ನೀರು ಹರಿದಿತ್ತು. ತಾಲೂಕು ಕಚೇರಿ ಮುಂಭಾಗ ಮರ ಬಿದ್ದು ರಸ್ತೆ ಬದಿಯಲ್ಲಿದ್ದ ಶೆಡ್‌ಗಳಿಗೆ ಹಾನಿಯಾಗಿದೆ.

ಶಿವಮೊಗ್ಗ – ತೀರ್ಥಹಳ್ಳಿಯ ಹೆದ್ದಾರಿಯಲ್ಲಿ ಗಾಜನೂರಿನ ಚೆಕ್‌ಪೋಸ್ಟ್ ಸಮೀಪ ಆಲದ ಮರ ಧರೆಗುರುಳಿತ್ತು. ಇದರಿಂದ ಈ ರಸ್ತೆಯಲ್ಲಿ ಕೆಲವು ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು.

ಶಿವಮೊಗ್ಗ ಜಿಲ್ಲೆಯ ಹಲವು ಕಡೆ ಇವತ್ತು ಮಳೆಯಾಗಿದೆ. ಸಾಗರ, ತೀರ್ಥಹಳ್ಳಿ, ಹೊಸನಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಭಾರಿ ಮಳೆಯಾಗಿದೆ. ಭದ್ರಾವತಿಯ ವಿವಿಧೆಡೆಯು ಮಳೆಯಾಗಿದೆ.


ಇದನ್ನೂ ಓದಿ » ಶಿವಮೊಗ್ಗದಲ್ಲಿ 2 ದಿನ ಕಾರು ಎಕ್ಸ್‌ಚೇಂಜ್ ಮೇಳ, ರೈತರು, ಸರ್ಕಾರಿ ನೌಕರರು, ಕಾರ್ಪೊರೇಟ್ ಉದ್ಯೋಗಿಗಳಿಗೆ ಭರ್ಜರಿ ಆಫರ್

LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು






