ಶಿವಮೊಗ್ಗ ಲೈವ್.ಕಾಂ | SHIMOGA NEWS | 16 JUNE 2021
ಭಾರಿ ಮಳೆ ಹಿನ್ನೆಲೆ ತುಂಗಾ ಮತ್ತು ಭದ್ರಾ ಜಲಾಶಯದ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ತುಂಗಾ ಜಲಾಶಯದ ಒಳ ಹಾಗೂ ಹೊರ ಹರಿವು ಗಂಟೆಗಂಟೆಗೂ ಹೆಚ್ಚಳವಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇವತ್ತು ಬೆಳಗ್ಗೆ 8 ಗಂಟೆಯಿಂದ ತುಂಗಾ ಡ್ಯಾಂನಿಂದ 21,500 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇವತ್ತು ಒಳಹರಿವು ಹೆಚ್ಚಳವಾಗುವ ನಿರೀಕ್ಷೆ ಇದೆ. ಹಾಗಾಗಿ ಯಾವುದೆ ಸಂದರ್ಭ ಜಲಾಶಯದಿಂದ 30 ಸಾವಿರ ಕ್ಯೂಸೆಕ್ ನೀರು ಹೊಳೆಗೆ ಹರಿಸುವ ಸಾಧ್ಯತೆ ಇದೆ.
ಮತ್ತೊಂದೆಡೆ ಭದ್ರಾ ಜಲಾಶಯದ ಹಿನ್ನೀರು ಭಾಗದಲ್ಲೂ ಭಾರಿ ಮಳೆಯಾಗುತ್ತಿದೆ. ಆದ್ದರಿಂದ ಜಲಾಶಯದ ಒಳ ಹರಿವು ಪ್ರಮಾಣ 12,557 ಕ್ಯೂಸೆಕ್ ಇದೆ. ಇದರಿಂದ ಜಲಾಶಯದ ನೀರಿನ ಮಟ್ಟ 144 ಅಡಿಗೆ ಏರಿಕೆಯಾಗಿದೆ. ಕಳೆದ ವರ್ಷ ಈ ಹೊತ್ತಿಗೆ ಭದ್ರಾ ಜಲಾಶಯದ ನೀರಿನ ಮಟ್ಟ 134.7 ಅಡಿಗಳಷ್ಟಿತ್ತು.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]