ಶಿವಮೊಗ್ಗ ಲೈವ್
ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ತುಂಗಾ ಮತ್ತು ಭದ್ರಾ ಜಲಾಶಯಗಳ (Dam Level) ಒಳ ಹರಿವು ಪ್ರಮಾಣ ತಗ್ಗಿದೆ. (ಈ ಸುದ್ದಿಯನ್ನು ಇನ್ನು 36 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
» ತುಂಗಾ ಜಲಾಶಯ
ಗಾಜನೂರಿನ ತುಂಗಾ ಜಲಾಶಯಕ್ಕೆ ಇವತ್ತು 28,013 ಕ್ಯೂಸೆಕ್ ಒಳ ಹರಿವು ಇದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ 26,867 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಪ್ರಸ್ತುತ ಜಲಾಶಯದಲ್ಲಿ 2.299 ಟಿಎಂಸಿ ನೀರಿನ ಸಂಗ್ರಹವಿದೆ.
ಇದನ್ನೂ ಓದಿ » ಹೊಸನಗರದಲ್ಲಿ ಮುಂದುವರೆದ ಮಳೆ, ಇವತ್ತು ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ? ಡ್ಯಾಂಗಳಿಗೆ ಎಷ್ಟಿದೆ ಒಳ ಹರಿವು?
» ಭದ್ರಾ ಜಲಾಶಯ
ಭದ್ರಾ ಜಲಾಶಯದ ಒಳ ಹರಿವು ಪ್ರಮಾಣವು ಕಡಿಮೆಯಾಗಿದೆ. ಸದ್ಯ 15,995 ಕ್ಯೂಸೆಕ್ ಒಳ ಹರಿವು ಇದೆ. ಜಲಾಶಯದ ನೀರಿನ ಮಟ್ಟ 172.8 ಅಡಿ ಇದೆ. ಇನ್ನು, 3102 ಕ್ಯೂಸೆಕ್ ಹೊರ ಹರಿವು ಇದೆ. ಪ್ರಸ್ತುತ ಜಲಾಶಯದಲ್ಲಿ 55.780 ಟಿಎಂಸಿ ನೀರಿನ ಸಂಗ್ರಹವಿದೆ.

