ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 19 JUNE 2021
ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಜಲಾಶಯಗಳ ಒಳ ಹರಿವು ಪ್ರಮಾಣವು ಸ್ವಲ್ಪ ತಗ್ಗಿದೆ. ಆದರೆ ತುಂಗಾ ಜಲಾಶಯದ ಹೊರಹರಿವು ಮಾತ್ರ ಕಡಿಮೆಯಾಗಿಲ್ಲ.
ತುಂಗಾ ಜಲಾಶಯದ ಒಳಹರಿವು ಕಡಿಮೆಯಾಗಿದೆ. 27,040 ಕ್ಯೂಸೆಕ್ ಒಳ ಹರಿವು ಇದೆ. ಆದರೆ ಮಳೆ ಹೆಚ್ಚಳವಾಗುವ ಸಂಭವ ಇರುವುದರಿಂದ 33,104 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಈ ಪೈಕಿ 33,069 ಕ್ಯೂಸೆಕ್ ನೀರನ್ನು ನೇರವಾಗಿ ನದಿಗೆ ಬಿಡಲಾಗುತ್ತಿದೆ.
ಭದ್ರಾ ಜಲಾಶಯಕ್ಕೂ ಉತ್ತಮ ಒಳಹರಿವು ಇದೆ. 17,885 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಇದರಿಂದ ಜಲಾಶಯದಲ್ಲಿ ನೀರಿನ ಮಟ್ಟ 148.6 ಅಡಿಗೆ ಏರಿಕೆಯಾಗಿದೆ. ಸದ್ಯ 24.612 ಟಿಎಂಸಿ ನೀರು ಸಂಗ್ರಹವಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]