ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಮನೆಯ ಬೀರುವಿನಲ್ಲಿದ್ದ 95 ಗ್ರಾಂ ಬಂಗಾರದ ಆಭರಣ ಕಳವು ಮಾಡಿದ್ದ ಇಬ್ಬರನ್ನು ಪೇಪರ್ ಟೌನ್ ಪೊಲೀಸರು ಬಂಧಿಸಿದ್ದಾರೆ (Arrest). ಇವರಿಂದ ₹7.82 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನ ಕೆಂಗೇರಿ ನಿವಾಸಿ ಆರ್.ಮಂಜುಳಾ(21) ಮತ್ತು ಸುಜೈನ್ ಖಾನ್ (24 ) ಬಂಧಿತರು. ಕಳೆದ ಆ.18ರಂದು ಭದ್ರಾವತಿಯ ಐದನೇ ವಾರ್ಡ್‌ನ ಚಂದ್ರಮ್ಮ ಎಂಬುವರ ಮನೆಗೆ ಬಂದಿದ್ದ ಇವರು ಬೀರುವಿನಲ್ಲಿದ್ದ ಚಿನ್ನಾಭರಣ ಕಳವು ಮಾಡಿದ್ದರು.
ಈ ಬಗ್ಗೆ ಚಂದ್ರಮ್ಮ ಅವರು ಪೇಪರ್ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಭದ್ರಾವತಿ ಡಿವೈಎಸ್ಪಿ ಕೆ.ಆರ್.ನಾಗರಾಜ ಅವರ ಮೇಲ್ವಿಚಾರಣೆಯಲ್ಲಿ ಪೇಪರ್‌ಟೌನ್ ಠಾಣೆ ಇನ್ಸ್‌ಪೆಕ್ಟರ್ ಕೆ.ನಾಗಮ್ಮ ನೇತೃತ್ವದಲ್ಲಿ ಸಿಬ್ಬಂದಿ ರತ್ನಾಕರ್, ಪ್ರಕಾಶ, ಅರುಣ್, ನಾಗರಾಜ, ಹನುಮಂತ, ಅನುರೂಪಾ ಕಾರ್ಯಾಚರಣೆ ನಡೆಸಿ ಕಳ್ಳರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





