ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜೂನ್ 2020
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆರಡು ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇಬ್ಬರಿಗೆ ಸೋಂಕು ತಗುಲಿದೆ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಇದೆ ಮೊದಲು ದೊಡ್ಡ ಪ್ರಮಾಣದಲ್ಲಿ ಸೋಂಕಿನಿಂದ ಗುಣವಾಗಿ ಹಲವರು ಮನೆ ಸೇರಿದ್ದಾರೆ.

ಇವತ್ತು ಯಾರಿಗೆಲ್ಲ ಸೋಂಕು ತಗುಲಿದೆ?
ಪಿ8493 – 51 ವರ್ಷದ ಪುರುಷ
ಪಿ8494 – 51 ವರ್ಷದ ಪುರುಷ
ಸೋಂಕು ತಗುಲಿದ್ದು ಹೇಗೆ?
ಪಿ8493ಗೆ ಸೋಂಕು ತಗುಲಿದ್ದು ಹೇಗೆ ಅನ್ನುವುದು ಇನ್ನು ಖಚಿತವಾಗಿಲ್ಲ. ಇವರಿಗೆ ಕರೋನ ಇರುವುದು ದೃಢವಾಗುತ್ತಿದ್ದಂತೆ ಚಿಕಿತ್ಸೆ ಆರಂಭಿಸಲಾಗಿದೆ. ಇನ್ನು, ಪಿ8494 ಗುಜರಾತ್ ರಾಜ್ಯದಿಂದ ಹಿಂತಿರುಗಿದ್ದಾರೆ ಎಂದು ತಿಳಿಸಲಾಗಿದೆ. ಇವರಿಗೂ ಚಿಕಿತ್ಸೆ ನಡೆಯುತ್ತಿದೆ.
ದೊಡ್ಡ ಪ್ರಮಾಣದಲ್ಲಿ ಚೇತರಿಕೆ
ಮತ್ತೊಂದೆಡೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 17 ಮಂದಿ ಇವತ್ತು ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಷ್ಟೊಂದು ಪ್ರಮಾಣದ ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

About The Editor
ನಿತಿನ್ ಆರ್.ಕೈದೊಟ್ಲು





