ಶಿವಮೊಗ್ಗ: ನಗರದ ಸನ್ರೈಸ್ ಫೆಸಿಲಿಟಿ ಸರ್ವಿಸಸ್ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳ (various jobs) ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರಿಗೆ ಇದು ಉತ್ತಮ ಅವಕಾಶವಾಗಿದೆ.
ಯಾವ್ಯಾವ ಹುದ್ದೆಗಳಿವೆ?
ಹೌಸ್ ಕೀಪಿಂಗ್ ಸೂಪರ್ವೈಸರ್, ಹೌಸ್ ಕೀಪಿಂಗ್ ಮತ್ತು ಸೆಕ್ಯೂರಿಟಿ ವಿಭಾಗಕ್ಕೆ ಫೀಲ್ಡ್ ಆಫೀಸರ್, ಹೌಸ್ ಕೀಪಿಂಗ್ ಮತ್ತು ಸೆಕ್ಯೂರಿಟಿ ಆಪರೇಷನ್ಸ್ ವಿಭಾಗಕ್ಕೆ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಮಾಸಿಕ ₹20,000 ರಿಂದ ₹50,000 ವರೆಗೆ ವೇತನ ನೀಡಲಾಗುವುದು. ಇದರೊಂದಿಗೆ ಉದ್ಯೋಗಿಗಳಿಗೆ ಇಎಸ್ಐ (ESI), ಪಿಎಫ್ (PF) ಸೌಲಭ್ಯ ಹಾಗೂ ವಸತಿ ಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಮತ್ತು ಅರ್ಜಿ ಸಲ್ಲಿಸಲು ಮೊಬೈಲ್ ಸಂಖ್ಯೆ 94820 16888 ಅಥವಾ 97420 16888 ಗೆ ಸಂಪರ್ಕಿಸಬಹುದಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ