ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಡಿಸೆಂಬರ್ 2021
ಮಂಗಳೂರು – ಬೆಂಗಳೂರು ರೈಲಿನ ಮಾದರಿಯಲ್ಲೇ ಶಿವಮೊಗ್ಗದ ಒಂದು ರೈಲಿಗೂ ವಿಸ್ಟಾಡೋಮ್ ಬೋಗಿ ಅಳವಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಪ್ರವಾಸಿಗರು, ಪ್ರಯಾಣಿಕರನ್ನು ಸೆಳೆದಿದ್ದ ವಿಸ್ಟಾಡೋಮ್ ಬೋಗಿ, ಈಗ ಶಿವಮೊಗ್ಗದ ರೈಲೊಂದರಲ್ಲಿ ಅಳವಡಿಸಲಾಗುತ್ತಿದೆ.
ಏನಿದು ವಿಸ್ಟಾಡೋಮ್ ಬೋಗಿ?
ವಿಸ್ಟಾಡೋಮ್ ಬೋಗಿಗಳು ಸಾಮಾನ್ಯ ಬೋಗಿಗಳಂತೆ ಇರುವುದಿಲ್ಲ. ಎಸಿ ಸೀಟರ್ ಕೋಚ್ ಬೋಗಿಯಲ್ಲಿ ಪ್ರಕೃತಿ ಸೌಂದರ್ಯ ಸವಿಯಲು ಸಂಪೂರ್ಣವಾಗಿ ವ್ಯವಸ್ಥೆ ಮಾಡಲಾಗಿರುತ್ತದೆ. ದೊಡ್ಡ ಗಾಜಿನ ಕಿಟಕಿ ಇರಲಿದೆ. ಬೋಗಿಗೆ ಗಾಜಿನ ಛಾವಣಿ ಇರಲಿದೆ. ಸೀಟುಗಳು ಕೂಡ ಯಾವುದೆ ದಿಕ್ಕಿಗೆ ತಿರುಗಿಸಲು ಅವಕಾಶವಿರಲಿದೆ.
ಮಂಗಳೂರು – ಬೆಂಗಳೂರು ರೈಲಿನಲ್ಲಿ ಪ್ರಾಯೋಗಿಕವಾಗಿ ವಿಸ್ಟಾಡೋಮ್ ಬೋಗಿ ಅಳವಡಿಸಲಾಗಿತ್ತು. ಈ ಬೋಗಿಗಳಲ್ಲಿ ಪ್ರಯಾಣಿಸಲು ಭಾರಿ ಡಿಮಾಂಡ್ ಇದೆ. ಈಗ ಶಿವಮೊಗ್ಗದ ರೈಲು ಒಂದಕ್ಕೆ ವಿಸ್ಟಾಡೋಮ್ ಬೋಗಿ ಅಳವಡಿಸಲು ರೈಲ್ವೆ ಇಲಾಖೆ ನಿರ್ಧಿರಿಸಿದೆ.
ಯಾವ ರೈಲಿಗೆ ವಿಸ್ಟಾಡೋಮ್ ಬೋಗಿ?
ರೈಲು ಸಂಖ್ಯೆ 16579 / 16580 – ಯಶವಂತಪುರ – ಶಿವಮೊಗ್ಗ ಟೌನ್ – ಯಶವಂತಪುರ ಇಂಟರ್ಸಿಟಿ ಎಕ್ಸ್ ಪ್ರೆಸ್ ರೈಲಿಗೆ ವಿಸ್ಟಾಡೋಮ್ ಬೋಗಿ ಅಳವಡಿಸಲಾಗುತ್ತಿದೆ. ತಾತ್ಕಾಲಿಕವಾಗಿ ಒಂದು ವಿಸ್ಟಾಡೋಮ್ ಬೋಗಿ ಅಳವಡಿಸಲು ನಿರ್ಧರಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

2021ರ ಡಿಸೆಂಬರ್ 25 ರಿಂದ 2022ರ ಮಾರ್ಚ್ 31ರವರೆಗೆ ಯಶವಂತಪುರ – ಶಿವಮೊಗ್ಗ ಟೌನ್ ಇಂಟರ್ಸಿಟಿ ಎಕ್ಸ್ ಪ್ರೆಸ್ ರೈಲು, ಶಿವಮೊಗ್ಗ ಟೌನ್ – ಯಶವಂತಪುರ ಇಂಟರ್ಸಿಟಿ ಎಕ್ಸ್ ಪ್ರೆಸ್ ರೈಲಿನಲ್ಲಿ ಒಂದು ಎಸಿ ಬೋಗಿ ವಿಸ್ಟಾಡೋಮ್ ಬೋಗಿ ಅಳವಡಿಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






