ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಡಿಸೆಂಬರ್ 2021
ವಿಧಾನ ಪರಿಷತ್ ಚುನಾವಣೆಯಲ್ಲಿ ಈವರೆಗೂ ಶೇ. 96.49ರಷ್ಟು ಮತದಾನವಾಗಿದೆ. 4018 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಸಂಜೆ 4 ಗಂಟೆವರೆಗೂ ಮತದಾನಕ್ಕೆ ಅವಕಾಶವಿದೆ.
ಬೆಳಗ್ಗೆ 10 ಗಂಟೆವರೆಗೆ ಶೇ.30.23ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 12 ಗಂಟೆವರೆಗೆ ಶೇ.70.27ರಷ್ಟು ಮತದಾನವಾಗಿತ್ತು.
ಮುಖಂಡರಿಂದ ಬಿರುಸಿನ ಮತದಾನ
ಸಂಸದರು, ಸಚಿವರು, ಶಾಸಕರು ಬಿರುಸಿನಿಂದ ಮತದಾನ ಮಾಡಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಮತದಾನ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ತಮ್ಮ ಹಕ್ಕು ಚಲಾಯಿಸಿದರು.
ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ, ಆರ್.ಪ್ರಸನ್ನಕುಮಾರ್ ಅವರು ಪಾಲಿಕೆ ಸಭಾಂಗಣದಲ್ಲಿ ಮತದಾನ ಮಾಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರು ಶಿಕಾರಿಪುರ ಪುರಸಭೆ ಆವರಣದಲ್ಲಿನ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಇನ್ನು, ಸೊರಬ ಪುರಸಭೆ ಆವರಣದ ಮತಗಟ್ಟೆಯಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಮತದಾನ ಮಾಡಿದರು. ಸಾಗರ ನಗರಸಭೆಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಶಾಸಕ ಹರತಾಳು ಹಾಲಪ್ಪ ಮತದಾನ ಮಾಡಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200