ಸಾಗರ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಸಂದರ್ಭ ನೀರು ಹೊರ ಬಿಡುವ ಸಾಧ್ಯತೆ ಇದೆ. ಆದ್ದರಿಂದ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು, ಪ್ರವಾಸಿಗರು ನದಿಗೆ ಇಳಿಯಬಾರದು ಎಂದು ಕರ್ನಾಟಕ ವಿದ್ಯುತ್ ನಿಗಮ ಎಚ್ಚರಿಕೆ (Warning) ನೀಡಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819 ಅಡಿ. ಮಂಗಳವಾರ ಜಲಾಶಯದ ನೀರಿನ ಮಟ್ಟ 1801.10 ಅಡಿಗೆ ತಲುಪಿತ್ತು. ಅಲ್ಲದೆ 32 ಸಾವಿರ ಕ್ಯೂಸೆಕ್ ಒಳ ಹರಿವು ಕೂಡ ಇತ್ತು. ಇದೇ ರೀತಿ ಒಳ ಹರಿವು ಮುಂದುವರೆದರೆ ಜಲಾಶಯದ ನೀರಿನ ಮಟ್ಟ ಶೀಘ್ರ ಗರಿಷ್ಠ ಮಟ್ಟಕ್ಕೆ ತಲುಪಲಿದೆ. ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಯಾವುದೇ ಸಂದರ್ಭ ಗೇಟ್‌ಗಳ ಮೂಲಕ ನೀರನ್ನು ಹೊರ ಬಿಡುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ NH ಆಸ್ಪತ್ರೆಯಲ್ಲಿ ಸರ್ವೈವರ್ಸ್ ಕ್ಲಿನಿಕ್, ಜು.17ರಂದು ಕ್ಯಾನ್ಸರ್ ಬಗ್ಗೆ ಮಹತ್ವದ ಚರ್ಚೆ, ಏನಿದು ಕ್ಲಿನಿಕ್?
ಅಣೆಕಟ್ಟೆಯ ಕೆಳದಂಡೆಯಲ್ಲಿ ವಾಸಿಸುತ್ತಿರುವವರು, ನದಿ ಪಾತ್ರದಲ್ಲಿ ಇರುವವರು ಕೂಡಲೆ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಪ್ರವಾಸಿಗರು ಕೂಡ ನೀರಿಗೆ ಇಳಿಯಬಾರದು ಎಂದು ಕೆಪಿಸಿಯ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






