ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಬೆಂಗಳೂರು: ಪಶ್ಚಿಮ ಘಟ್ಟದ ನದಿಗಳಿಗೆ (Rivers) ಕಸಾಯಿಖಾನೆ ಮತ್ತು ಆಸ್ಪತ್ರೆಗಳ ತ್ಯಾಜ್ಯವನ್ನು ಸುರಿಯಲಾಗುತ್ತಿದ್ದು ಸಂಬಂಧಪಟ್ಟವರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಡಿ.ಎಸ್.ಅರುಣ್ ಕಳವಳ ವ್ಯಕ್ತಪಡಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ
ಪರಿಷತ್ತಿನ ಕಲಾಪದ ಶೂನ್ಯವೇಳೆಯಲ್ಲಿ ಅವರು ವಿಷಯ ಪ್ರಸ್ತಾಪಿಸಿದರು. ಮೊದಲು ಇಂತಹ ಸಮಸ್ಯೆ ಇರಲಿಲ್ಲ. ವರ್ಷದ ಹಿಂದೆ ಇದು ಆರಂಭವಾಗಿದ್ದು, ಈಗ ವಿಪರೀತ ಎನಿಸುವಷ್ಟಾಗಿದೆ. ತುಂಗಾ, ಭದ್ರಾ ಮತ್ತು ಶರಾವತಿ ನದಿಗಳಿಗೆ ತ್ಯಾಜ್ಯ ಸುರಿಯುವುದು ಅವ್ಯಾಹತವಾಗಿ ನಡೆಯುತ್ತಿದೆ. ಈ ಬಗ್ಗೆ ಸ್ಥಳೀಯ ಸಂಸ್ಥೆಗಳಿಗೆ ಹಲವು ಬಾರಿ ದೂರು ನೀಡಲಾಗಿದೆ. ಆದರೆ ಸಮಸ್ಯೆ ಬಗೆಹರಿದಿಲ್ಲ. ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದಲೇ ಹೀಗಾಗಿದೆ ಎಂದು ಆರೋಪಿಸಿದರು.

ಮಲೆನಾಡಿನ ಪ್ರವಾಸಿ ತಾಣಗಳಿಗೆ ಈಚಿನ ದಿನಗಳಲ್ಲಿ ಜನಸಂದಣಿ ಹೆಚ್ಚಾಗಿದೆ. ಪ್ರವಾಸಿಗರ ನಿಯಂತ್ರಣಕ್ಕೆ ಮತ್ತು ಆ ಸ್ಥಳಗಳ ನಿರ್ವಹಣೆಗೆ ಯಾವುದೇ ವ್ಯವಸ್ಥೆ ಇಲ್ಲ. ಇದರಿಂದಾಗಿ ಎಲ್ಲ ಪ್ರವಾಸಿ ತಾಣಗಳೂ ಕಸದ ತೊಟ್ಟಿಗಳಂತಾಗಿವೆ. ಚಾರ್ಮಾಡಿ ಮತ್ತು ಆಗುಂಬೆ ಘಾಟಿಯ ತಿರುವುಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಬಾಟಲಿಗಳು, ಮದ್ಯದ ಬಾಟಲಿಗಳು ರಾಶಿ ರಾಶಿ ಬಿದ್ದಿವೆ. ಇದನ್ನು ನಿಯಂತ್ರಿಸಲು ಸರ್ಕಾರವು ತಕ್ಷಣವೇ ಮುಂದಾಗಬೇಕು ಎಂದು ಆಗ್ರಹಿಸಿದರು.

LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು















