ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
DAM LEVEL, 10 AUGUST 2024 : ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಸಂಪೂರ್ಣ ಕಡಿಮೆಯಾಗಿದೆ. ಹಾಗಾಗಿ ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಲಿಂಗನಮಕ್ಕಿ ಜಲಾಶಯದ ಒಳ ಹರಿವು ಮತ್ತಷ್ಟು ಕುಸಿತ ಕಂಡಿದೆ. ಇವತ್ತು 12,442 ಕ್ಯೂಸೆಕ್ ಒಳ ಹರಿವು ಇದೆ. 6,089 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 1816.60 ಅಡಿ ಇದೆ. ಒಟ್ಟು 151.64 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 143.36 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ ⇒ ಅಡಿಕೆ ಧಾರಣೆ | 9 ಆಗಸ್ಟ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
ಗಾಜನೂರಿನ ತುಂಗಾ ಜಲಾಶಯದ ಒಳ ಮತ್ತು ಹೊರ ಹರಿದು ಪ್ರಮಾಣವು ಕಡಿಮೆಯಾಗಿದೆ. 10,066 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹೊರ ಹರಿವು ಕಡಿಮೆ ಆಗಿರುವುದರಿಂದ ಶಿವಮೊಗ್ಗದಲ್ಲಿ ತುಂಗಾ ನದಿಯ ನೀರಿನ ಮಟ್ಟ ಇಳಿಕೆಯಾಗಿದೆ.
ಇದನ್ನೂ ಓದಿ ⇒ ನಾಗರ ಪಂಚಮಿಯಂದೆ ಹಾವು ಕಡಿದು ಬಾಣಂತಿ ಸಾವು
ಭದ್ರಾ ಜಲಾಶಯದ ಒಳ ಹರಿವು ಕೂಡ ತಗ್ಗಿದೆ. ಇವತ್ತು 7468 ಕ್ಯೂಸೆಕ್ ಒಳ ಹರಿವು ಇದೆ. 6311 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಜಲಾಶಯದಲ್ಲಿನ ಇವತ್ತಿನ ನೀರಿನ ಮಟ್ಟ 180.5 ಅಡಿಯಷ್ಟಿದೆ. ಪ್ರಸ್ತುತ ಜಲಾಶಯದಲ್ಲಿ 64.75 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ ⇒ ಶಿಕಾರಿಪುರದಲ್ಲಿ ಬೆಕ್ಕು ಕಚ್ಚಿ ಮಹಿಳೆ ಸಾವು