ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಇವತ್ತು ಎಷ್ಟಿದೆ ಒಳ ಹರಿವು? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 JULY 2024

DAM LEVEL : ಮಲೆನಾಡು ಭಾಗದಲ್ಲಿ ನಿರಂತರ ಮತ್ತು ಜೋರು ಮಳೆಗೆ ಮೂರು ಪ್ರಮುಖ ಜಲಾಶಯಗಳಿಗೆ ನೀರಿನ ಒಳ ಹರಿವು ಹೆಚ್ಚಳವಾಗಿದೆ. ತುಂಗಾ ಜಲಾಶಯ ಭರ್ತಿಯಾಗಿದ್ದು ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳಿಗೆ ಉತ್ತಮ ಒಳ ಹರಿವು ಇದೆ.

 ತುಂಗಾ ಜಲಾಶಯ 

ಕಳೆದ ಎರಡು ದಿನಕ್ಕೆ ಹೋಲಿಸಿದರೆ ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಇವತ್ತು ತುಸು ಕಡಿಮೆಯಾಗಿದೆ. 64,764 ಕ್ಯೂಸೆಕ್‌ ಒಳ ಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.

 ಲಿಂಗನಮಕ್ಕಿ ಜಲಾಶಯ 

ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 87,496 ಕ್ಯೂಸೆಕ್‌ ಒಳ ಹರಿವು ಇದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 1819 ಅಡಿ. ಇವತ್ತು ನೀರಿನ ಮಟ್ಟ 1791.50 ಅಡಿ ತಲುಪಿದೆ. 76.40 ಟಿಎಂಸಿ ನೀರು ಸಂಗ್ರಹವಾಗಿದೆ.

 ಭದ್ರಾ ಜಲಾಶಯ 

ಭದ್ರಾ ಜಲಾಶಯದ ಒಳ ಹರಿವು ಉತ್ತಮವಾಗಿದೆ. ಇವತ್ತು 49555 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 157.11 ಅಡಿಗೆ ತಲುಪಿದೆ. ಒಟ್ಟು 71.5 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ 41.06 ಟಿಎಂಸಿ ನೀರು ಸಂಗ್ರಹವಾಗಿದೆ.

ಇದನ್ನೂ ಓದಿ ⇓

ಶಿವಮೊಗ್ಗ ಜಿಲ್ಲೆಯಾದ್ಯಂತ ಜು.19ರಂದು ಶಾಲೆ, ಕಾಲೇಜುಗಳಿಗೆ ರಜೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment