ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
DAM LEVEL, 2 AUGUST 2024 : ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ. ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳ ಒಳ, ಹೊರ ಹರಿವು ಎಷ್ಟಿದೆ? ಇಲ್ಲಿದೆ ವಿವರ.
ಲಿಂಗನಮಕ್ಕಿ ಜಲಾಶಯಕ್ಕೆ 51,961 ಕ್ಯೂಸೆಕ್ ಒಳ ಹರಿವು ಇದೆ. 16,913 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ ಒಂದು ಅಡಿ ಏರಿಕೆಯಾಗಿದೆ. ಪ್ರಸ್ತುತ 1815 ಅಡಿಯಷ್ಟು ನೀರು ಸಂಗ್ರಹವಾಗಿದೆ.
ತುಂಗಾ ಜಲಾಶಯಕ್ಕೆ 43,013 ಕ್ಯೂಸೆಕ್ ಒಳ ಹರಿವು ಇದೆ. ಜಲಾಶಯ ಭರ್ತಿ ಆಗಿರುವ ಹಿನ್ನೆಲೆ ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಳವಾದರೆ ಒಳ ಹರಿವು ಮತ್ತಷ್ಟು ಏರಿಕೆಯಾಗಲಿದೆ.
ಭದ್ರಾ ಜಲಾಶಯಕ್ಕೆ 38,870 ಕ್ಯೂಸೆಕ್ ಒಳ ಹರಿವು ಇದೆ. 56,636 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಜಲಾಶಯದಲ್ಲಿ 182.7 ಅಡಿಯಷ್ಟು ನೀರು ಸಂಗ್ರಹವಾಗಿದೆ. ನಾಲ್ಕು ಗೇಟ್‌ಗಳ ಮೂಲಕ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಜಲಾಶಯ ಬಳಿ ಬರುತ್ತಿದ್ದಾರೆ.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಇವತ್ತು ಸಾಧಾರಣ ಮಳೆ, ವಿವಿಧೆಡೆ ಚುದುರಿದಂತೆ ವರ್ಷಧಾರೆ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು





