ತುಂಗಾ, ಭದ್ರ, ಲಿಂಗನಮಕ್ಕಿ ಜಲಾಶಯಗಳಿಗೆ ಇವತ್ತು ಎಷ್ಟಿದೆ ಒಳ ಹರಿವು?

DAM LEVEL, 21 AUGUST 2024 : ಮಲೆನಾಡು ಭಾಗದ ಅಲ್ಲಲ್ಲಿ ಜೋರು ಮಳೆಯಾಗುತ್ತಿದೆ. ಆದರೆ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ.➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

EBEDEF -DAM-LEVEL-LINGANAMAKKI-DAM.webpಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 7721 ಕ್ಯೂಸೆಕ್‌ ಒಳ ಹರಿವು ಇದೆ. 7545 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 1819 ಅಡಿ. ಇವತ್ತಿನ ನೀರಿನ ಮಟ್ಟ 1816.80 ಅಡಿ ಇದೆ. ಪ್ರಸ್ತುತ ಡ್ಯಾಮ್‌ನಲ್ಲಿ 144.28 ಟಿಎಂಸಿ ನೀರು ಸಂಗ್ರಹವಾಗಿದೆ.

EBEDEF - DAM-LEVEL-TUNGA-DAM.webpತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಇವತ್ತು ಜಲಾಶಯಕ್ಕೆ 8186 ಕ್ಯೂಸೆಕ್‌ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ತೀರ್ಥಹಳ್ಳಿ ಸೇರಿದಂತೆ ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಒಳ ಹರಿವು ಪ್ರಮಾಣಲ್ಲಿ ಏರಿಳಿತವಾಗುತ್ತಿದೆ.

EBEDEF - DAM-LEVEL-BHADRA-DAM.webpಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ಭದ್ರಾ ಜಲಾಶಯಕ್ಕೆ ಒಳ ಹರಿವು ಇಳಿಕೆಯಾಗಿದೆ. ಇವತ್ತು 6118 ಕ್ಯೂಸೆಕ್‌ ಒಳ ಹರಿವು ಇದೆ. 5841 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. 186 ಅಡಿ ಗರಿಷ್ಠ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 180.1 ಅಡಿಯಷ್ಟು ನೀರಿದೆ. ಸದ್ಯ 64.32 ಟಿಎಂಸಿ ನೀರು ಸಂಗ್ರಹವಾಗಿದೆ.

ಇದನ್ನೂ ಓದಿ ⇒ ಪಡಿತರ ಚೀಟಿದಾರರೆ ಗಮನಿಸಿ, ಆ.31 ಕೊನೆ ದಿನ, ತಪ್ಪಿದರೆ ಪಡಿತರ ಸಿಗಲ್ಲ

Leave a Comment