ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 21 JULY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
DAM LEVEL : ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆ ಮೂರು ಪ್ರಮುಖ ಜಲಾಶಯಗಳಿಗೆ ಒಳ ಹರಿವು ಕಡಿಮೆಯಾಗಿದೆ.
ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು?
ಲಿಂಗನಮಕ್ಕಿ ಜಲಾಶಯದ ಒಳ ಹರಿವು 48,793 ಕ್ಯೂಸೆಕ್ ಇದೆ. 1844 ಕ್ಯೂಸೆಕ್ ಹೊರ ಹರಿವು ಇದೆ. ಜಲಾಶಯದಲ್ಲಿ 1796.05 ಅಡಿ ನೀರಿದೆ. ಒಟ್ಟು 151.64 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 86.47 ಟಿಎಂಸಿ ನೀರು ಇದೆ. ಲಿಂಗನಮಕ್ಕಿ ಜಲಾಶಯ
ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆ ಇವತ್ತು 37,290 ಕ್ಯೂಸೆಕ್ ಒಳ ಹರಿವು ಇದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಶನಿವಾರ 60 ಸಾವಿರ ಕ್ಯೂಸೆಕ್ ಒಳ ಹರಿವು ಇತ್ತು. ಇವತ್ತು ಒಳ ಹರಿವು ಪ್ರಮಾಣ ಕುಸಿತ ಕಂಡಿದೆ. ತುಂಗಾ ಜಲಾಶಯ
ಭದ್ರಾ ಜಲಾಶಯಕ್ಕು ಕೂಡ ಒಳ ಹರಿವು ತಗ್ಗಿದೆ. ಇವತ್ತು 23,674 ಕ್ಯೂಸೆಕ್ ಒಳ ಹರಿವು ಇದೆ. 191 ಕ್ಯೂಸೆಕ್ ಹೊರ ಹರಿವು. ಜಲಾಶಯದ ನೀರಿನ ಮಟ್ಟ 164.4 ಅಡಿಗೆ ತಲುಪಿದೆ. ಒಟ್ಟು 71.5 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಡ್ಯಾಂನಲ್ಲಿ 47.06 ಟಿಎಂ ನೀರು ಸಂಗ್ರಹವಾಗಿದೆ. ಭದ್ರಾ ಜಲಾಶಯ
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಇಳಿಕೆ, ಹವಾಮಾನ ಇಲಾಖೆಯಿಂದ ಮತ್ತೊಂದು ಅಲರ್ಟ್ ಪ್ರಕಟ