ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 JULY 2024
DAM LEVEL : ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ತಗ್ಗಿದೆ. ಹಾಗಾಗಿ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ.
ಯಾವ್ಯಾವ ಜಲಾಶಯಕ್ಕೆ ಎಷ್ಟಿದೆ ಒಳ ಹರಿವು?
ಲಿಂಗನಮಕ್ಕಿ ಜಲಾಶಯದ ಒಳ ಹರಿವು 44,387 ಕ್ಯೂಸೆಕ್ಗೆ ಇಳಿಕೆಯಾಗಿದೆ. ಭಾನುವಾರ 48 ಸಾವಿರ ಕ್ಯೂಸೆಕ್ ಒಳಹರಿವು ಇತ್ತು. 1898 ಕ್ಯೂಸೆಕ್ ಹೊರ ಹರಿವು ಇದೆ. ಇನ್ನು, ಜಲಾಶಯದ ನೀರಿನ ಮಟ್ಟ 1797.60 ಅಡಿಗೆ ತಲುಪಿದೆ. ಜಲಾಶಯದಲ್ಲಿ ಒಟ್ಟು 151.64 ಟಿಎಂಸಿ ನೀರು ಸಂಗ್ರಹವಾಗಲಿದೆ. ಈವರೆಗೆ 90.14 ಟಿಎಂಸಿ ಮಾತ್ರ ನೀರು ಸಂಗ್ರಹವಾಗಿದೆ.
ತುಂಗಾ ಜಲಾಶಯದ ಒಳ ಹರಿವು ಪ್ರಮಾಣವು ಕಡಿಮೆಯಾಗಿದೆ. ಇವತ್ತು 34,150 ಕ್ಯೂಸೆಕ್ ಒಳ ಹರಿವು ಇದೆ. ಭಾನುವಾರ 53 ಸಾವಿರ ಕ್ಯೂಸೆಕ್ ಒಳ ಹರಿವು ಇತ್ತು. ಈಗಾಗಲೇ ಜಲಾಶಯ ಭರ್ತಿ ಅಗಿರುವ ಹಿನ್ನೆಲೆ, ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹೊರ ಹರಿವು ಕಡಿಮೆಯಾದ ಹಿನ್ನೆಲೆ ತುಂಗಾ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ.
ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಾಗಿದೆ. ಇವತ್ತು 25,367 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಭಾನುವಾರ 23 ಸಾವಿರ ಕ್ಯೂಸೆಕ್ ಒಳ ಹರಿವು ಇತ್ತು. ಜಲಾಶಯದ ನೀರಿನ ಮಟ್ಟ 166.6 ಅಡಿಗೆ ತಲುಪಿದೆ. ಒಟ್ಟು 71.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಡ್ಯಾಂನಲ್ಲಿ ಈವರೆಗೆ 49.24 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯಲ್ಲಿ ತಗ್ಗಿದ ಮಳೆ, ಹೇಗಿದೆ ವಾತಾವರಣ? ಶಾಲೆ, ಕಾಲೇಜು ಪುನಾರಂಭ
LATEST NEWS
- ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್ನಲ್ಲಿ ಕಮಿಷನರ್ ಸಿಟಿ ರೌಂಡ್ಸ್

- ಶಿವಮೊಗ್ಗ, ಸಾಗರದಲ್ಲಿ ಕೆಲಸ ಹುಡುಕ್ತಿದ್ದೀರಾ? ಫೆಬ್ರವರಿ 18ರಂದು ನಡೆಯಲಿದೆ ಸಂದರ್ಶನ

- ಶಿವಮೊಗ್ಗ ಲೈವ್ BIG IMPACT, ಡೇಂಜರಸ್ ಹಂಪ್ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್

- ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

- ಫುಡ್ ಕೋರ್ಟ್ನಿಂದ ಹೊರ ಬಂದ ವ್ಯಕ್ತಿಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹೊಡೆದು ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು






