ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
DAM LEVEL, 26 AUGUST 2024 : ಮಲೆನಾಡು ಭಾಗದಲ್ಲಿ ಮಳೆಯಾಗಿದ್ದರಿಂದ ಲಿಂಗನಮಕ್ಕಿ ಮತ್ತು ತುಂಗಾ ಜಲಾಶಯಗಳ ಒಳ ಹರಿವು ತುಸು ಏರಿಕೆಯಾಗಿದೆ. ಆದರೆ ಭದ್ರಾ ಜಲಾಶಯದ ಒಳ ಹರಿವು ಯಥಾಸ್ಥಿತಿಯಲ್ಲಿದೆ.
ಯಾವ್ಯಾವ ಡ್ಯಾಮ್ಗೆ ಎಷ್ಟಿದೆ ಒಳ ಹರಿವು?
ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 20,967 ಕ್ಯೂಸೆಕ್ ಒಳ ಹರಿವು ಇದೆ. 7054 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 1819 ಅಡಿ. ಇವತ್ತು ನೀರಿನ ಮಟ್ಟ 1817.25 ಅಡಿ ಇದೆ. ಸದ್ಯ ಜಲಾಶಯದಲ್ಲಿ 145.80 ಟಿಎಂಸಿ ನೀರು ಸಂಗ್ರಹವಾಗಿದೆ.
ಗಾಜನೂರಿನ ತುಂಗಾ ಜಲಾಶಯಕ್ಕೆ 18,442 ಕ್ಯೂಸೆಕ್ ಒಳ ಹರಿವು ಇದೆ. ಜಲಾಶಯ ಭರ್ತಿ ಆಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಹರಿವು ಮತ್ತೆ ಏರಿಕೆಯಾಗಿದೆ.
ಇದನ್ನೂ ಓದಿ ⇒ GOOD MORNING ಶಿವಮೊಗ್ಗ | 26 ಆಗಸ್ಟ್ 2024 | ಒಂದೇ ಕ್ಲಿಕ್ನಲ್ಲಿ ಜಿಲ್ಲೆಯ ಎಲ್ಲಾ ಸುದ್ದಿ
ಭದ್ರಾ ಜಲಾಶಯಕ್ಕೆ ಇವತ್ತು 5614 ಕ್ಯೂಸೆಕ್ ಒಳ ಹರಿವು ಇದೆ. 3241 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಗರಿಷ್ಠ 186 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 180.7 ಅಡಿ ನೀರು ಸಂಗ್ರಹವಾಗಿದೆ. ಸದ್ಯ ಡ್ಯಾಮ್ನಲ್ಲಿ 64.84 ಟಿಎಂಸಿ ನೀರು ಇದೆ.
ಇದನ್ನೂ ಓದಿ ⇒ ಇವತ್ತು ಶಿಮುಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ, ಮೂವರ ನಡುವೆ ಇದೆ ಪೈಪೋಟಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422