ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 26 JULY 2024 : ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಜೋರಾದ ಹಿನ್ನೆಲೆ ಮೂರು ಪ್ರಮುಖ ಜಲಾಶಯಗಳ (Dam) ಒಳ ಹರಿವು ಹೆಚ್ಚಳವಾಗಿದೆ. ಇವತ್ತು ಯಾವ್ಯಾವ ಜಲಾಶಯಕ್ಕೆ ಎಷ್ಟು ಒಳ ಹರಿವು ಇದೆ, ನೀರಿನ ಮಟ್ಟ ಎಷ್ಟಾಗಿದೆ. ಇಲ್ಲಿದೆ ಡಿಟೇಲ್ಸ್.
ಲಿಂಗನಮಕ್ಕಿ ಜಲಾಶಯದ ಒಳ ಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಇವತ್ತು 65,147 ಕ್ಯೂಸೆಕ್ ಒಳ ಹರಿವು ಇದೆ. ನೀರಿನ ಮಟ್ಟ 1804.80 ಅಡಿಗೆ ತಲುಪಿದೆ. ಒಟ್ಟು 151.64 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಡ್ಯಾಂನಲ್ಲಿ ಈವರೆಗೆ 108.31 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿ ಇವತ್ತು ಗಂಗೆ ಪೂಜೆ ನೆರವೇರಿಸಲಾಗುತ್ತಿದೆ.
ತುಂಗಾ ಜಲಾಶಯದ ಒಳ ಹರಿವು ಕೂಡ ಏರಿಕೆಯಾಗಿದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇವತ್ತು 63,942 ಕ್ಯೂಸೆಕ್ ಒಳ ಹರಿವು ಇದೆ. ತೀರ್ಥಹಳ್ಳಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಮಳೆ ಜೋರಾಗಿದ್ದು, ಇವತ್ತು ಒಳ ಹರಿವು ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಭದ್ರಾ ಜಲಾಶಯದ ಒಳ ಹರಿವು ಕೂಡ ಚೇತರಿಕೆ ಕಂಡಿದೆ. ಇವತ್ತು 35,318 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. 202 ಕ್ಯೂಸೆಕ್ ಹೊರ ಹರಿವು ಇದೆ. ಜಲಾಶಯದ ನೀರಿನ ಮಟ್ಟ 174.3 ಅಡಿಗೆ ತಲುಪಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಇವತ್ತು ಆರೆಂಜ್ ಅಲರ್ಟ್ ಇದ್ದು, ಮಳೆ ಜೋರಾಗಲಿದೆ. ಹಾಗಾಗಿ ಭದ್ರಾ ಜಲಾಶಯಕ್ಕೆ ಇವತ್ತು ಉತ್ತಮ ಒಳ ಹರಿವು ದಾಖಲಾಗಲಿದೆ.
ಇದನ್ನೂ ಓದಿ ⇓
ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್, ಜೋರು ಮಳೆ ಜೊತೆಗೆ ವಿಪರೀತ ಗಾಳಿ, ಜನರಲ್ಲಿ ಭೀತಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






