DAM LEVEL, 28 JULY 2024 : ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಮೂರು ಪ್ರಮುಖ ಜಲಾಶಯಗಳ ಒಳ ಹರಿವು ತಗ್ಗಿದೆ. ಇವತ್ತು ಯಾವ್ಯಾವ ಜಲಾಶಯದ ನೀರಿನ ಮಟ್ಟ ಎಷ್ಟಿದೆ?
ಲಿಂಗನಮಕ್ಕಿ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. ಇವತ್ತು 37,733 ಕ್ಯೂಸೆಕ್ ಒಳ ಹರಿವು ಇದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ 1.05 ಅಡಿ ಹೆಚ್ಚಳವಾಗಿದೆ. ಇವತ್ತು ನೀರಿನ ಮಟ್ಟ 1808.05 ಅಡಿಗೆ ತಲುಪಿದೆ. 3525.44 ಕ್ಯೂಸೆಕ್ ಹೊರ ಹರಿವು ಇದೆ.
ತೀರ್ಥಹಳ್ಳಿ ಸೇರಿದಂತೆ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಇವತ್ತು 36,489 ಕ್ಯೂಸೆಕ್ ಒಳ ಹರಿವು ಇದೆ. ಜಲಾಶಯ ಭರ್ತಿಯಾಗಿದ್ದು, ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.
ಭದ್ರಾ ಜಲಾಶಯಕ್ಕೆ ಇವತ್ತು 35,557 ಕ್ಯೂಸೆಕ್ ಒಳ ಹರಿವು ಇದೆ. 210 ಕ್ಯೂಸೆಕ್ ಹೊರ ಹರಿವು ಇದೆ. ಡ್ಯಾಂನ ಗರಿಷ್ಠ ಮಟ್ಟ 186 ಅಡಿ ಇದೆ. ಇವತ್ತು 180.7 ಅಡಿಗೆ ತಲುಪಿದೆ. ಒಟ್ಟು 71.5 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 64.87 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ ⇓
ತೀರ್ಥಹಳ್ಳಿಯಲ್ಲಿ ರಸ್ತೆ ಕುಸಿತ, ಅಲ್ಲಲ್ಲಿ ತೋಟ ಜಲಾವೃತ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200