ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
DAM LEVEL, 3 SEPTEMBER 2024 : ಜಿಲ್ಲೆಯ ಅಲ್ಲಲ್ಲಿ ಕೆಲ ಹೊತ್ತು ಜೋರು ಮಳೆಯಾಗುತ್ತಿದೆ. ಇದರಿಂದ ಜಲಾಶಯಗಳಿಗೆ ಒಳ ಹರಿವು ಇದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು?
ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 16,970 ಕ್ಯೂಸೆಕ್ ನೀರು ಒಳ ಹರಿವು ಇದೆ. 13,063 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 1819 ಅಡಿ. ಇವತ್ತಿನ ನೀರಿನ ಮಟ್ಟ 1817.60 ಅಡಿ ಇದೆ. ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ 151.64 ಟಿಎಂಸಿ ಇದೆ. ಇವತ್ತು 146.88 ಟಿಎಂಸಿ ನೀರು ಸಂಗ್ರಹವಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ತುಂಗಾ ಜಲಾಶಯಕ್ಕೆ ಉತ್ತಮ ಒಳ ಹರಿವು ದಾಖಲಾಗಿದೆ. ಇವತ್ತು 26,997 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಹರಿವು ಇದೆ.
ಭದ್ರಾ ಜಲಾಶಯಕ್ಕು ನೀರಿನ ಒಳ ಹರಿವು ಇದೆ. 7248 ಕ್ಯೂಸೆಕ್ ನೀರು ಹರಿದು ಬರುತ್ತಿದೆ. 6948 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಗರಿಷ್ಠ ಮಟ್ಟ 186 ಅಡಿ ಇದೆ. ಇವತ್ತಿನ ನೀರಿನ ಮಟ್ಟ 183 ಅಡಿ ಇದೆ. ಪ್ರಸ್ತುತ 67.82 ಟಿಎಂಸಿ ನೀರು ಸಂಗ್ರಹವಿದೆ.
ಇದನ್ನು ಓದಿ » GOOD MORNING ಶಿವಮೊಗ್ಗ | ಜಿಲ್ಲೆಯ ಕಂಪ್ಲೀಟ್ ಸುದ್ದಿ ಒಂದೇ ಕ್ಲಿಕ್‌ನಲ್ಲಿ