ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ ನೀರಿನ ಸಂಗ್ರಹ?

DAM LEVEL, 5 AUGUST 2024 : ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಿಗೆ ಒಳ ಹರಿವು ಕಡಿಮೆಯಾಗಿದೆ. ಇವತ್ತು ಯಾವ್ಯಾವ ಜಲಾಶಯಗಳಿಗೆ ಎಷ್ಟಿದೆ ಒಳ ಹರಿವು. (ಈ ಸುದ್ದಿಯನ್ನು ಇನ್ನು 58 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

DAM-LEVEL-LINGANAMAKKI-DAM.webpಲಿಂಗನಮಕ್ಕಿ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. 31,051 ಕ್ಯೂಸೆಕ್‌ ಒಳ ಹರಿವು ಇದೆ. 14,796 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದ ನೀರಿನ ಮಟ್ಟ 1816 ಅಡಿ ಇದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ 151.64 ಟಿಎಂಸಿ ಇದೆ. ಪ್ರಸ್ತುತ 141.68 ಟಿಎಂಸಿ ನೀರು ಸಂಗ್ರಹವಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ

DAM-LEVEL-TUNGA-DAM.webpಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಕೂಡ ಕಡಿಮೆಯಾಗಿದೆ. 24,828 ಕ್ಯೂಸೆಕ್‌ ಒಳ ಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ನೀರಿನ ಹೊರ ಹರಿವು ಕಡಿಮೆಯಾಗಿರುವ ಹಿನ್ನೆಲೆ ತುಂಗಾ ನದಿ ನೀರಿನ ಮಟ್ಟ ಇಳಿಕೆಯಾಗಿದೆ. ಕೋರ್ಪಲಯ್ಯ ಛತ್ರ ಮಂಟಪದ ಅರ್ಧದಷ್ಟು ಮಾತ್ರ ಮುಳುಗಡೆಯಾಗಿದೆ.

DAM-LEVEL-BHADRA-DAM.webpಭದ್ರಾ ಜಲಾಶಯದ ಒಳ ಹರಿವು ಕೂಡ ಕಡಿಮೆಯಾಗಿದೆ. ಇವತ್ತು 16,071 ಕ್ಯೂಸೆಕ್‌ ಒಳ ಹರಿವು ಇದೆ. 15,551 ಕ್ಯೂಸೆಕ್‌ ಹೊರ ಹರಿವು ಇದೆ. ಗರಿಷ್ಠ 186 ಅಡಿ ಸಾಮರ್ಥ್ಯದ ಜಲಾಶಯದಲ್ಲಿ 180 ಅಡಿಯಷ್ಟು ನೀರು ಸಂಗ್ರಹವಿದೆ.

ಇದನ್ನೂ ಓದಿ ⇓

ತಳಿರು ತೋರಣದಿಂದ ಅಲಂಕಾರ, ಪಟಾಕಿ ಸಿಡಿಸಿ ಸಂಭ್ರಮ, ಊರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ

Bhadra-Dam-Water-Out-Flow

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment