ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
DAM LEVEL, 6 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಕಡಿಮೆಯಾಗಿದೆ.
ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 22,357 ಕ್ಯೂಸೆಕ್ ಒಳ ಹರಿವು ಇದೆ. ಹಾಗಾಗಿ 17,301 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯ ಗರಿಷ್ಠ ನೀರಿನ ಮಟ್ಟ 1819 ಅಡಿ. ಇವತ್ತು ನೀರಿನ ಮಟ್ಟ 1816.15 ಅಡಿ ಇದೆ. ಒಟ್ಟು 151.64 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 142.12 ಟಿಎಂಸಿ ನೀರು ಸಂಗ್ರಹವಾಗಿದೆ.
ಗಾಜನೂರಿನ ತುಂಗಾ ಜಲಾಶಯಕ್ಕೆ ಇವತ್ತು 21,610 ಕ್ಯೂಸೆಕ್ ಒಳ ಹರಿವು ಇದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ತುಂಗಾ ನದಿಯಲ್ಲಿ ನೀರಿನ ಹರಿವು ಇದ್ದು, ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಅರ್ಧ ಭಾಗ ಮಾತ್ರ ಮುಳಗಡೆಯಾಗಿದೆ.
ಭದ್ರಾ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. ಇವತ್ತು 7,531 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ ಇವತ್ತು 180 ಅಡಿ ಇದೆ. ಜಲಾಶಯದಲ್ಲಿ 64.22 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ ⇓
ಗುಡ್ ಮಾರ್ನಿಂಗ್ ಶಿವಮೊಗ್ಗ | ಒಂದೇ ಕ್ಲಿಕ್‌ನಲ್ಲಿ ಇಡೀ ಜಿಲ್ಲೆಯ ಕಂಪ್ಲೀಟ್ ನ್ಯೂಸ್
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















