ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ ನೀರಿನ ಮಟ್ಟ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

DAM LEVEL, 6 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಕಡಿಮೆಯಾಗಿದೆ.

DAM-LEVEL-LINGANAMAKKI-DAM.webpಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 22,357 ಕ್ಯೂಸೆಕ್‌ ಒಳ ಹರಿವು ಇದೆ. ಹಾಗಾಗಿ 17,301 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯ ಗರಿಷ್ಠ ನೀರಿನ ಮಟ್ಟ 1819 ಅಡಿ. ಇವತ್ತು ನೀರಿನ ಮಟ್ಟ 1816.15 ಅಡಿ ಇದೆ. ಒಟ್ಟು 151.64 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 142.12 ಟಿಎಂಸಿ ನೀರು ಸಂಗ್ರಹವಾಗಿದೆ.

DAM-LEVEL-TUNGA-DAM.webpಗಾಜನೂರಿನ ತುಂಗಾ ಜಲಾಶಯಕ್ಕೆ ಇವತ್ತು 21,610 ಕ್ಯೂಸೆಕ್‌ ಒಳ ಹರಿವು ಇದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ತುಂಗಾ ನದಿಯಲ್ಲಿ ನೀರಿನ ಹರಿವು ಇದ್ದು, ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಅರ್ಧ ಭಾಗ ಮಾತ್ರ ಮುಳಗಡೆಯಾಗಿದೆ.

DAM-LEVEL-BHADRA-DAM.webpಭದ್ರಾ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. ಇವತ್ತು 7,531 ಕ್ಯೂಸೆಕ್‌ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ ಇವತ್ತು 180 ಅಡಿ ಇದೆ. ಜಲಾಶಯದಲ್ಲಿ 64.22 ಟಿಎಂಸಿ ನೀರು ಸಂಗ್ರಹವಾಗಿದೆ.

ಇದನ್ನೂ ಓದಿ ⇓

ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಒಂದೇ ಕ್ಲಿಕ್‌ನಲ್ಲಿ ಇಡೀ ಜಿಲ್ಲೆಯ ಕಂಪ್ಲೀಟ್‌ ನ್ಯೂಸ್‌

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment