ಶಿವಮೊಗ್ಗ ಜಿಲ್ಲೆಯ ಪದವಿ ಕಾಲೇಜುಗಳಿಗೆ ರಜೆ ಇದ್ಯಾ? ಜಿಲ್ಲಾಡಳಿತದ ಸ್ಪಷ್ಟನೆ ಏನು?

SHIMOGA : ಭಾರಿ ಮಳೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ (Holiday) ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಈ ಮಧ್ಯೆ ಪದವಿ ಕಾಲೇಜುಗಳಿಗೆ ರಜೆ ಇದೆಯ ಎಂಬ ಗೊಂದಲ ನಿರ್ಮಾಣವಾಗಿತ್ತು.

ಜಿಲ್ಲಾಧಿಕಾರಿ ಆದೇಶದಲ್ಲಿ ಸ್ಪಷ್ಟನೆ

ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ ⇓

ಶಿವಮೊಗ್ಗಕ್ಕೆ ಇವತ್ತು ರೆಡ್‌ ಅಲರ್ಟ್‌ ಪ್ರಕಟ

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌